News Karnataka Kannada
Sunday, April 28 2024
ಗದಗ

ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳ ಪರದಾಟ: ಬಸ್​ ತಡೆದು ಪ್ರತಿಭಟನೆ

protest against Shakti project
Photo Credit : News Kannada

ಗದಗ: ಶಕ್ತಿ ಯೋಜನೆ ಜಾರಿಯಾದ ನಂತರ ಬಸ್​ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದ ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ  ತೊಂದರೆಯಾಗುತ್ತಿರುವುದು ಸರ್ವೇ ಸಾಮಾನ್ಯವಾಗಿದೆ.

ಇದೆ ಶಕ್ತಿ ಯೋಜನೆಯಿಂದಾಗಿ ಗದಗದಲ್ಲಿ ವಿದ್ಯಾರ್ಥಿಗಳಿಗೆ ಬಸ್ ನಲ್ಲಿ ಹತ್ತಲೂ ಸಾಧ್ಯವಾಗದೆ ಸರ್ಕಾರದ ವಿರುದ್ಧ ತಿರುಗಿಬಿದ್ದ ಘಟನೆ ನಡೆದಿದೆ.

ನಗರದ ಪುಟ್ಟರಾಜ್ ಬಸ್ ನಿಲ್ದಾಣದಲ್ಲಿ  ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಬಸ್ ನಿಲ್ದಾಣದ ಎರಡು ಗೇಟ್ ಬಂದ್ ಮಾಡಿ ಕೆಎಸ್ಆರ್​ಟಿಸಿ ಬಸ್​ಗೆ ಕಲ್ಲು ತೂರಿ  ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಬಸ್​ಗಳು ರಸ್ತೆಯಲ್ಲೇ ನಿಂತಿದ್ದವು. ಹೀಗಾಗಿ ಕೆಲಕಾಲ ಟ್ರಾಫಿಕ್​ ಜಾಮ್ ಆಗಿತ್ತು.

ಪ್ರತಿಭಟನೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಸಿಪಿಐ ಡಿಬಿ ಪಾಟೀಲ್ ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದರು. ಈ ವೇಳೆ ವಿದ್ಯಾರ್ಥಿಗಳು ಹಾಗೂ ಸಿಪಿಐ ನಡುವೆ ವಾಗ್ವಾದ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು