ಗದಗ: ಶಕ್ತಿ ಯೋಜನೆ ಜಾರಿಯಾದ ನಂತರ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದ ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವುದು ಸರ್ವೇ ಸಾಮಾನ್ಯವಾಗಿದೆ.
ಇದೆ ಶಕ್ತಿ ಯೋಜನೆಯಿಂದಾಗಿ ಗದಗದಲ್ಲಿ ವಿದ್ಯಾರ್ಥಿಗಳಿಗೆ ಬಸ್ ನಲ್ಲಿ ಹತ್ತಲೂ ಸಾಧ್ಯವಾಗದೆ ಸರ್ಕಾರದ ವಿರುದ್ಧ ತಿರುಗಿಬಿದ್ದ ಘಟನೆ ನಡೆದಿದೆ.
ನಗರದ ಪುಟ್ಟರಾಜ್ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಬಸ್ ನಿಲ್ದಾಣದ ಎರಡು ಗೇಟ್ ಬಂದ್ ಮಾಡಿ ಕೆಎಸ್ಆರ್ಟಿಸಿ ಬಸ್ಗೆ ಕಲ್ಲು ತೂರಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಬಸ್ಗಳು ರಸ್ತೆಯಲ್ಲೇ ನಿಂತಿದ್ದವು. ಹೀಗಾಗಿ ಕೆಲಕಾಲ ಟ್ರಾಫಿಕ್ ಜಾಮ್ ಆಗಿತ್ತು.
ಪ್ರತಿಭಟನೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಸಿಪಿಐ ಡಿಬಿ ಪಾಟೀಲ್ ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದರು. ಈ ವೇಳೆ ವಿದ್ಯಾರ್ಥಿಗಳು ಹಾಗೂ ಸಿಪಿಐ ನಡುವೆ ವಾಗ್ವಾದ ನಡೆಯಿತು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ