News Karnataka Kannada
Tuesday, April 30 2024
ಗದಗ

ಮೊಬೈಲ್ ಕಳ್ಳತನ ಮಾಡಿ ಆನ್​ಲೈನ್ ಆ್ಯಪ್ ಮೂಲಕ ಹಣ ವರ್ಗಾವಣೆ

ಪ್ರಾಂಶುಪಾಲರ ಮೊಬೈಲ್ ಕಳ್ಳತನ ಮಾಡಿದ ದುಷ್ಕರ್ಮಿಗಳು ಮೊಬೈಲ್​ನ ಆನ್​ಲೈನ್ ಆ್ಯಪ್ ಮೂಲಕ ₹1.40 ಲಕ್ಷ ದುಡ್ಡು ವರ್ಗಾವಣೆ ಮಾಡಿಕೊಂಡ ಘಟನೆ ನರಗುಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.
Photo Credit : News Kannada

ಗದಗ: ಪ್ರಾಂಶುಪಾಲರ ಮೊಬೈಲ್ ಕಳ್ಳತನ ಮಾಡಿದ ದುಷ್ಕರ್ಮಿಗಳು ಮೊಬೈಲ್​ನ ಆನ್​ಲೈನ್ ಆ್ಯಪ್ ಮೂಲಕ ₹1.40 ಲಕ್ಷ ಹಣ ವರ್ಗಾವಣೆ ಮಾಡಿಕೊಂಡ ಘಟನೆ ನರಗುಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.

ಪ್ರಾಂಶುಪಾಲರಾದ ಶ್ರೀಕಾಂತ ಕೃಷ್ಣಾಜಿ ಜೋಷಿ ಅವರು ಎಂದಿನಂತೆ ಕಾಲೇಜ್​​ಗೆ ತೆರಳುತ್ತಿದ್ದ ವೇಳೆ  ಬಸ್ ನಿಲ್ದಾಣದಲ್ಲಿ ದುಷ್ಕರ್ಮಿಗಳು 20 ಸಾವಿರ ಮೌಲ್ಯದ ಮೊಬೈಲ್​ ಅನ್ನು ಪ್ರಾಂಶುಪಾಲರ ಜೇಬಿನಿಂದ ಕಳ್ಳತನ ಮಾಡಿದ್ದಾರೆ.

ಬಳಿಕ ಮೊಬೈಲ್​​ನಲ್ಲಿದ್ದ ಎಸ್​​ಬಿಐ ಖಾತೆಯ ಯುಪಿಐ ಬಳಸಿಕೊಂಡು ಬರೋಬ್ಬರಿ 1 ಲಕ್ಷದ 40 ಸಾವಿರ ರೂಗಳನ್ನ ತಮ್ಮ ಅಕೌಂಟ್​ಗೆ ವರ್ಗಾವಣೆ ಮಾಡಿಕೊಂಡಿದ್ದಾರೆ.

ಮೊದಲು ₹75 ಸಾವಿರ, ₹50 ಸಾವಿರ ಹಾಗೂ ₹15 ಸಾವಿರ ಎಂಬಂತೆ ಒಟ್ಟು ಮೂರು ಹಂತದಲ್ಲಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ.

ಈ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು