ಹಾವೇರಿ : ರಷ್ಯಾ-ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಮೃತಪಟ್ಟ ಹಾವೇರಿಯ ನವೀನ್ ಶೇಖರಪ್ಪ ಗ್ಯಾನಗೌಡರ್ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ದಾವಣಗೆರೆ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲರು ಪಾಲ್ಗೊಂಡಿದ್ದು, ಬಳಿಕ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಚಳಗೇರಿ ಗ್ರಾಮದಲ್ಲಿರುವ ನವೀನ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.
ಅಂದ್ಹಾಗೆ, ರಷ್ಯಾ-ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಮಾರ್ಚ್ 1ರಂದು ನವೀನ್ ಉಕ್ರೇನ್ನಲ್ಲಿ ರಷ್ಯಾ ಶೆಲ್ ದಾಳಿಗೆ ಸಿಲುಕಿ ಮೃತಪಟ್ಟಿದ್ದರು.