ಹಂಸಭಾವಿ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ತೀವ್ರವಾಗಿ ಗಾಯಗೊಂಡ ಘಟನೆ ಇಲ್ಲಿಗೆ ಸಮೀಪದ ಕಚವಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಕಚವಿಯ ಚಿದಂಬರರಾವ್ ನಾಡಗೇರ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಗ್ಯಾಸ್ ಜೋಡಣೆ ವೇಳೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆ ಮನೆಯ ಚಾವಣಿ ಛಿದ್ರಗೊಂಡಿದೆ. ಜೊತೆಗೆ ಮನೆಯಲ್ಲಿದ್ದ ಚಿದಂಬರರಾವ್, ಪುಷ್ಪಾ, ಸೀತಾರಾಂ, ಗೋವಿಂದರಾಜ, ತನು ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಅವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಈ ಕುರಿತು ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ದೇವರಾಜ ತಿಳಿಸಿದ್ದಾರೆ.