ಹಾವೇರಿ

ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಹೆಚ್ಚುವರಿ ಸಾರಿಗೆಗಳ ಕಾರ್ಯಾಚರಣೆ

ಹಾವೇರಿ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗಿದೆ.

ಅಕ್ಟೋಬರ್ 31ರ ಭಾನುವಾರ, ನವಂಬರ್ 1ರಂದು ಕನ್ನಡ ರಾಜ್ಯೋತ್ಸವ, ನ. 03 ರಂದು ನರಕ ಚತುರ್ದಶಿ, ನ.05 ಬಲಿಪಾಡ್ಯ ಮತ್ತು ನ.07 ರಂದು ಭಾನುವಾರ ಹಬ್ಬದ ರಜೆಗಳನ್ನು ಉಪಯೋಗಿಸಿಕೊಂಡು ದೀಪಾವಳಿ ಹಬ್ಬಕ್ಕೆ ಬಂದು ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 30-10-2021 ಮತ್ತು 31-10-2021 ರಂದು ಬೆಂಗಳೂರು, ಮಂಗಳೂರು, ಹೈದರಾಬಾದ್, ಪಣಜಿ, ಪೂಣೆ, ಮುಂಬಯಿ ಮತ್ತು ಇನ್ನಿತರ ಪ್ರಮುಖ ನಗರಗಳಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಸ್ವಂತ ಊರುಗಳಿಗೆ ಹಬ್ಬಕ್ಕಾಗಿ ತೆರಳುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಮತ್ತು ಬಾಗಲಕೋಟೆ ವಿಭಾಗಗಳಿಂದ ಒಟ್ಟು 600 ಕ್ಕಿಂತ ಅಧಿಕ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.

ಹಬ್ಬ ಮುಗಿದ ನಂತರ ಬೆಂಗಳೂರು, ಮತ್ತು ಇತರ ನಗರಗಳಿಗೆ ತೆರಳುವ ಪ್ರಯಾಣಿಕರಿಗಾಗಿ ನವೆಂಬರ್ 05 ಮತ್ತು 07ರಂದು ಸಹ ಬೇಡಿಕೆಗಳಿಗನುಗುಣವಾಗಿ ಹೆಚ್ಚುವರಿ ವಿಶೇಷ ಸಾರಿಗೆ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಸಂಸ್ಥೆಯ ಅಧೀಕೃತ ವೆಬಸೈಟ್ www.ksrtc.in ಅಥವಾ ksrtc mobile App ನಲ್ಲಿ ಮುಂಗಡವಾಗಿ ವೇಗಧೂತ ಹಾಗೂ ಪ್ರತಿಷ್ಠಿತ ಸಾರಿಗೆಗಳಲ್ಲಿ ಟಿಕೇಟ್ ಗಳನ್ನು ಬುಕಿಂಗ್ ಮಾಡಿಕೊಳ್ಳಬಹುದಾಗಿದೆ. ಸರಕಾರವು ನಿಗದಿ ಪಡಿಸಿದ ಕೋವಿಡ್ ನಿಯಮಗಳನ್ನು ಅನುಸರಿಸುವದರೊಂದಿಗೆ ಸದರಿ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

5 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

6 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

7 hours ago