Categories: ಹಾವೇರಿ

ನವೀನ್ ಮೃತದೇಹ ತಾಯ್ನಾಡಿಗೆ ಆಗಮನ ಹಿನ್ನೆಲೆ ಮೋದಿಗೆ ಕೃತಜ್ಞತೆ ಸಲ್ಲಿಸಿದ ಬೊಮ್ಮಾಯಿ

ಬೆಂಗಳೂರು: ಉಕ್ರೇನ್ ಯುದ್ಧದ ವೇಳೆ ಗುಂಡು ತಗುಲಿ ಮೃತಪಟ್ಟ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ‌ನವೀನ್ ಗ್ಯಾನಗೌಡರ್ ಮೃತದೇಹ ತಾಯ್ನಾಡಿಗೆ ಆಗಮನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ, ಕೃತಜ್ಞತೆ ಸಲ್ಲಿಸಿದ್ದಾರೆ.

ಚಳಗೆರೆಯಿಂದ ಬೆಂಗಳೂರಿಗೆ ವಾಪಸಾದ ಬಳಿಕ ದೂರವಾಣಿ ಕರೆ ಮಾಡಿದ ಸಿಎಂ, ಮೂರು ನಿಮಿಷಗಳ ಕಾಲ ಮಾತುಕತೆ ನಡೆಸಿದರು.

ನವೀನ್ ಮೃತದೇಹವನ್ನು ದೇಶಕ್ಕೆ ತರಿಸುವಲ್ಲಿ ತಮ್ಮ ಪಾತ್ರ ಬಹಳ ಮುಖ್ಯವಾಗಿದೆ. ಕೊನೆಯ ಬಾರಿಗೆ ನವೀನ್ ಮುಖ ನೋಡಬೇಕೆಂಬುದು ಅವರ ತಂದೆ ತಾಯಿ ಆಸೆಯಾಗಿತ್ತು. ಹೆತ್ತವರ ಈ ಆಸೆಯನ್ನು ತಾವು ಈಡೇರಿಸಿದ್ದೀರಿ. ಕರ್ನಾಟಕದ ರಾಜ್ಯದ ಪರವಾಗಿ ತಮಗೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಇದು ನಿಜಕ್ಕೂ ಅಸಾಧಾರಣ ಕೆಲಸ. ಯುದ್ಧ ಭೂಮಿಯಿಂದ ಮೃತದೇಹ ತರುವುದು ಸುಲಭದ ಮಾತಲ್ಲ. ಆದರೆ ತಮ್ಮ ರಾಜತಾಂತ್ರಿಕತೆಯಿಂದ ಅಸಾಧಾರಣ ಕೆಲಸವನ್ನು ಮಾಡಿ ತೋರಿಸಿದ್ದೀರಿ‌. ಇದಕ್ಕಾಗಿ ನಾನು ಧನ್ಯವಾದ ತಿಳಿಸ ಬಯಸುತ್ತೇನೆಂದು ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದರು.

Sneha Gowda

Recent Posts

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

4 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

4 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

19 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

25 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

38 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

56 mins ago