News Karnataka Kannada
Monday, April 29 2024
ಹಾವೇರಿ

ನವೀನ ಗ್ಯಾನಗೌಡರ ದೇಹದಾನಕ್ಕೆ ಕುಟುಂಬಸ್ಥರ ತೀರ್ಮಾನ

Haveri Student
Photo Credit :

ಹಾವೇರಿ: ಉಕ್ರೇನ್‌ನಲ್ಲಿ ಮೃತಪಟ್ಟ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ ಗ್ಯಾನಗೌಡರ ಮೃತದೇಹವನ್ನು ದಾವಣಗೆರೆಯ ಎಸ್‌.ಎಸ್‌.ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

‘ನನ್ನ ಮಗ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂಬ ಆಸೆ ಹೊಂದಿದ್ದ. ಆ ಆಸೆ ಈಡೇರಲಿಲ್ಲ. ಬೇರೆ ವೈದ್ಯಕೀಯ ವಿದ್ಯಾರ್ಥಿಗಳ ಮುಖಾಂತರವಾದರೂ ಅವನ ಮೃತದೇಹ ವೈದ್ಯಕೀಯ ಕ್ಷೇತ್ರಕ್ಕೆ ಬಳಕೆಯಾಗಲಿ ಎಂಬ ಉದ್ದೇಶದಿಂದ ಈ ತೀರ್ಮಾನ ಕೈಗೊಂಡಿದ್ದೇವೆ’ ತಂದೆ ಶೇಖರಪ್ಪ ಗ್ಯಾನಗೌಡರ ತಿಳಿಸಿದರು.

‘ಸೋಮವಾರ ಬೆಳಿಗ್ಗೆ 9 ಗಂಟೆಗೆ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮಕ್ಕೆ ಮಗನ ಪಾರ್ಥಿವ ಶರೀರ ತಲುಪುತ್ತದೆ.ನಂತರ ವೀರಶೈವ ಪದ್ಧತಿ ಪ್ರಕಾರ ಪೂಜಾ ಕಾರ್ಯ ನೆರವೇರಿಸಲಾಗುವುದು. ಸಂಜೆವರೆಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ದಾವಣಗೆರೆಯ ಎಸ್‌.ಎಸ್‌. ಆಸ್ಪತ್ರೆಗೆ ಮಗನ ಮೃತದೇಹವನ್ನು ದಾನ ಮಾಡುತ್ತೇವೆ’ ಎಂದು ಮೃತ ನವೀನ ಗ್ಯಾನಗೌಡರ ತಂದೆ ಶೇಖರಪ್ಪ ಗ್ಯಾನಗೌಡರ ತಿಳಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು