ಹಾವೇರಿ

ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಮ್ಮೆ ಮುನ್ನುಡಿ ಬರೆಯಿರಿ: ಸಚಿವ ಬಿ.ಸಿ.ಪಾಟೀಲ

ಹಾವೇರಿ: ಭಾರತೀಯ ಜನತಾಪಕ್ಷದ ಅಭ್ಯರ್ಥಿಯಾದ ಶಿವರಾಜ ಸಜ್ಜನರ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಮಾಡುವ ಮೂಲಕ ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಮ್ಮೆ ಮುನ್ನುಡಿ ಬರೆಯುವ ಮೂಲಕ ಹಿಂದಿನಂತೆ ಇನ್ನು ಮುಂದೆಯೂ ಅಭಿವೃದ್ಧಿಗೆ ಅವಕಾಶ ಕಲ್ಪಿಸಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಜಿಲ್ಲೆಯ ಹಾನಗಲ್ಲ ತಾಲೂಕಿನ ಬೆಂಚವಳ್ಳಿ, ಹಸನಬಾದ್ ಗುಡುಗುಡೆ ಯಲ್ಲಾಪೂರ ಹಾಗೂ ಹುಲ್ಲತ್ತಿ ಗ್ರಾಮಗಳಲ್ಲಿ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶೀವರಾಜ ಸಜ್ಜನರ ಪರವಾಗಿ ಮತಯಾಚನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾಯಕರಾಗಿದ್ದ ದಿವಂಗತ ಸಿ.ಎಂ.ಉದಾಸಿ ಅವರು ನಿಧನದಿಂದ ಈ ಚುನಾವಣೆ ಜರಗುತ್ತಿದೆ, ಅವರ ಆತ್ಮಕ್ಕೆ ಶಾಂತಿ ದೊರೆಯಬೇಕಾದರೆ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಅವರನ್ನು ಆಯ್ಕೆ ಮಾಡಬೇಕೆಂದು ಕ್ಷೇತ್ರದ ಮತದಾರರಲ್ಲಿ ವಿನಂತಿಸಿಕೊಂಡರು. ಅವರ ಅಭಿವೃದ್ಧಿ ಕಾರ್ಯಗಳನ್ನು ಶಿವರಾಜ ಸಜ್ಜನರ ಮುಂದುವರೆಸಿಕೊಂಡು ಹೇಗುತ್ತಾರೆ ಎಂದು ತಿಳಿಸಿದರು.

ಜಿಲ್ಲೆಯವರೇ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೈ ಬಲಪಡಿಸುವುದಕ್ಕೆ, ರಾಜ್ಯ ಹಾಗೂ ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಿವರಾಜ ಸಜ್ಜನ ಆಯ್ಕೆ ಬಹಳ ಮುಖ್ಯವಾಗಿದೆ ಎಂದರು.

ಹಾನಗಲ್ಲ ಕ್ಷೇತ್ರದ ಜನತೆ ಬಹಳ ಭುದ್ದಿವಂತರು ಯಾರನ್ನು ಯಾವ ಸಂದರ್ಭದಲ್ಲಿ ಆಯ್ಕೆ ಮಾಡಬೇನ್ನುವುದನ್ನು ಬಹಳ ವಿಚಾರ ಮಾಡಿ ಆಯ್ಕೆ ಮಾಡುತ್ತಾರೆ. ಪ್ರಸಕ್ತ ರಾಜ್ಯದಲ್ಲಿ ಬಿಜೆಪಿ ಅಧಿಕಾರಲ್ಲಿದೆ. ಮುಖ್ಯಮಂತ್ರಿಗಳೂ ಸಹ ಇದೇ ಜಿಲ್ಲೆಯವರಾಗಿದ್ದಾರೆ ಹೀಗಾಗಿ ಈ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ತೊಂದರೆ ಆಗುವುದಿಲ್ಲ ಆದ್ದರಿಂದ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಅವರನ್ನು ಆಯ್ಕೆ ಮಾಡುವಂತೆ ಅವರು ಕೇಳಿಕೊಂಡರು. ವೇದಕೆಯಲ್ಲಿ ಮಾಜಿ ಶಾಸಕ ಸುರೇಶಗೌಡ ಪಾಟೀಲ, ಶಂಕರಗೌಡ, ಎಂ.ಎನ್.ಪಾಟೀಲ, ಮಲ್ಲನಗೌಡರ, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.

Sneha Gowda

Recent Posts

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

15 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

31 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

2 hours ago