ಹಾವೇರಿ : ರಾಜ್ಯದ ರೈತ ಸಮುದಾಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೈತರ ಆದಾಯ ದ್ವಿಗುಣ ಗೊಳಿಸಲು ಮತ್ತಷ್ಟು ಯೋಜನೆ ಜಾರಿಗೊಳಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತರ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿಯಾಗಲಿದೆ. ಮುಂದಿನ ದಿನಗಳಲ್ಲಿ ರೈತ ಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.