ಹಾವೇರಿ

ಶಾಲಾ ವಿದ್ಯಾರ್ಥಿಗಳ ಜೊತೆ ಮಾತುಕತೆ : ಸಿಎಂ ಬಸವರಾಜ ಬೊಮ್ಮಾಯಿ

 ಶಿಗ್ಗಾವಿ :  ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ್ದ ಮುಖ್ಯಮಂತ್ರಿಗಳು ತಡಸ ಗ್ರಾಮದಿಂದ ಹೊರಟ ನಂತರ ಮಾರ್ಗಮಧ್ಯದ ಅರಟಾಳ-ದುಂಡಸಿ ಗ್ರಾಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆ ವಿದ್ಯಾರ್ಥಿಗಳು ಸಿಎಂ ಅವರನ್ನು ಸ್ವಾಗತಿಸಿದರು.

ವಿದ್ಯಾರ್ಥಿಗಳೊಂದಿಗೆ ಕೆಲ ಸಮಯ ಮುಖ್ಯಮಂತ್ರಿಗಳು ಮಾತನಾಡಿದರು. ವಿದ್ಯಾರ್ಥಿನಿಯೊಬ್ಬಳನ್ನು ಕರೆದು ಮಾತನಾಡಿಸಿದ ಸಿಎಂ ಯಾವ ಕ್ಲಾಸಲ್ಲಿ ಓದ್ತಾ ಇದ್ದೀಯಾ? ಕ್ಲಾಸುಗಳು ಆರಂಭವಾಗಿವೆಯಾ? ಏನಾದರೂ ಸಮಸ್ಯೆ ಇದೆಯಾ ಎಂದು ಪ್ರಶ್ನಿಸಿದರು. ನಂತರ ಚೆನ್ನಾಗಿ ಓದಮ್ಮಾ ಅಂತ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವಿದ್ಯಾರ್ಥಿಗಳ ಮುಖದಲ್ಲಿ ಮಂದಹಾಸ ಎದ್ದು ಕಾಣುತ್ತಿತ್ತು.

Sneha Gowda

Recent Posts

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

33 seconds ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

33 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

58 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago