Categories: ಹಾವೇರಿ

ಶಿಗ್ಗಾಂವ ತಾಲ್ಲೂಕಿಗೆ ಬಸವರಾಜ ಬೊಮ್ಮಾಯಿ ಭೇಟಿ: ನೆರೆ ಸಂತ್ರಸ್ತರಿಗೆ ಸಾಂತ್ವಾನ

ಹಾವೇರಿ: ಮನೆ ಕಳೆದು ಕೊಂಡವರಿಗೆ ತಕ್ಷಣ ರೂ ಹತ್ತು ಸಾವಿರ ಪರಿಹಾರ ಪಾವತಿ. ಅತಿವೃಷ್ಟಿ ನೆರೆಯಿಂದ ಹಾನಿಯ ಕುರಿತು ಸರ್ವೇ ಸಲಾಗುವುದು ಹಾಗೂ ತೊಂದರೆಗೊಳದವರಿಗೆ ಪರ್ಯಾಯ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚವೆ ನೀಡಲಾಗಿದೆ ಎಂದು ಗೃಹ, ಕಾನೂನು, ಸಂಸದೀಯ ವ್ಯವಹಾರಗಳ ಮತ್ತು ಶಾಸನ ರಚನೆ ಖಾತೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಪ್ರವಾಹ ಹಾಗೂ ಅತಿವೃಷ್ಟಿ ಪರಿಶೀಲನೆಗಾಗಿ ಶನಿವಾರ ಶಿಗ್ಗಾಂವ ತಾಲೂಕು ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ದೊಡ್ಡ ಪ್ರಮಾಣದ ಮಳೆ ಕಾರಣ ಜಿಲ್ಲೆಯ ಹಲವರು ಕೆರೆಕಟ್ಟೆಗಳು ಒಡೆದು ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ ಎಂದರು.
ಕುಮದ್ವತಿ, ವರದಾ ಹಾಗೂ ಧರ್ಮಾ ನದಿ ಪ್ರದೇಶದಲ್ಲಿ ನೀರಿನ ಹರಿವು ಹೆಚ್ಚಾಗಿ ವಿವಿಧ ಗ್ರಾಮಗಳ ಜಮೀನಿಗೆ ಹಾಗೂ ಮನೆಗಳಿಗೆ ನೀರು ನುಗ್ಗಿದೆ. ನೀರು ನುಗ್ಗಿ ಮನೆಗಳು ಕುಸಿದಿವೆ. ಈ ಮನೆಗಳ ಸಂಪೂರ್ಣ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು ಹಾಗೂ ಮನೆಗಳ ಸರ್ವೇ ಕಾರ್ಯ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ತಿಳಿಸಿದರು.
ಶಿಗ್ಗಾಂವ ತಾಲೂಕು ಕೆರೆಗಳು ಹೆಚ್ಚಾಗಿದ್ದು, ಶ್ಯಾಬಳ, ಶ್ಯಾಡಂಬಿ, ಹುಣಸಿಕಟ್ಟೆ ಕೆರೆಗಳು ಬ್ರಿಚ್ ಆಗಿದ್ದು, ಕೆರೆಗಳ ನೀರು ಮನೆಗಳಿಗೆ 32 ಮನೆಗಳು ಕುಸಿದಿವೆ. ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ಮಾಸೂರ ಭಾಗದಲ್ಲಿ ತುಂಬಾ ಹಾನಿಯಾಗಿದೆ. ಹಾನಿಯಾದ ಪ್ರದೇಶಗಳಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ. ಕೆರೆಗಳ ಬ್ರೀಜ್‍ಗೆ ಹಣ ನೀಡಿ ಜಿಲ್ಲೆ ಎಲ್ಲ ಕೆರೆಗಳ ದುರಸ್ತಿಗೆ ಕ್ರಮವಾಹಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಕೊರತೆಯಿಲ್ಲ. ಬರುವ ವಾರದಲ್ಲಿ ಇನ್ನೂ ಹೆಚ್ಚಿನ ಯೂರಿಯಾ ತರಿಸಲಾಗುವುದು ಹಾಗೂ ರೇಖೆಗಳನ್ನು ಬುಕ್ ಮಾಡಲಾಗಿದೆ ಎಂದು ತಿಳಿಸಿದರು.
ಮನವಿ: ಇದೇ ಸಂದರ್ಭದಲ್ಲಿ ಬೆಳೆಹಾನಿ ಹಾಗೂ ಮನೆಗಳ ಹಾನಿಗೆ ತುರ್ತು ಪರಿಹಾರ ಒದಗಿಸಲು ಹಾಗೂ ಮನೆಗಳ ಪುನರ್ ನಿರ್ಮಾಣ, ಗ್ರಾಮಗಳ ಸ್ಥಳಾಂತರಕ್ಕೆ ಗ್ರಾಮಸ್ಥರು ಸಚಿವರಿಗೆ ಮನವಿಮಾಡಿಕೊಂಡರು. ಪುನರ್ವಸತಿಗೆ ಹಾಗೂ ಪರಿಹಾರ ವಿತರಣೆಗೆ ತುರ್ತು ಕ್ರಮವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಉಪವಿಭಾಗಾಧಿಕಾರಿ ಶ್ರೀಮತಿ ಅನ್ನಪೂರ್ಣ ಮುದಕಮ್ಮನವರ , ಶಿಗ್ಗಾಂವ ತಹಶೀಲ್ದಾರ ಮಂಜುನಾಥ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Sampriya YK

Recent Posts

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

13 mins ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

43 mins ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

60 mins ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

2 hours ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

2 hours ago

ನೂತನ ಆದಿ ಬಸವಮಂದಿರ ಮೂರ್ತಿ ಪ್ರತಿಷ್ಠಾನ ಮತ್ತು ಕಳಸಾರೋಹಣ ಕಾರ್ಯಕ್ರಮ

ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…

2 hours ago