News Karnataka Kannada
Tuesday, May 07 2024
ಹಾವೇರಿ

ಹಾವೇರಿಯಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಡಿಸಿ ಸಂಜಯ ಸೂಚನೆ

Dc Haveri 14082021
Photo Credit :

ಹಾವೇರಿ: ಜಿಲ್ಲೆಯಲ್ಲಿರುವ ನಗರ ಹಾಗೂ ಪಟ್ಟಣಗಳ ವ್ಯಾಪ್ತಿಯಲ್ಲಿ ಮುಂದಿನ ಹದಿನೈದು ದಿನದೊಳಗಾಗಿ ಅಗತ್ಯವಿರುವೆಡೆ ಹೊಸ ಸಿಸಿ ಕ್ಯಾಮರಾಗಳ ಅಳವಡಿಕೆ ಹಾಗೂ ಹಳೆ ಕ್ಯಾಮರಾಗಳನ್ನು ದುರಸ್ತಿಗೊಳಿಸುವಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಹಾಗೂ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉನ್ನತ ಪೊಲೀಸ್ ಅಧಿಕಾರಿಗಳ ಸಂಪರ್ಕಿಸಿ ತಕ್ಷಣವೇ ಸಿಸಿ ಕ್ಯಾಮರಾ ಅಳವಡಿಕೆಗೆ ಕ್ರಮವಹಿಸಬೇಕು. ಕಡ್ಡಾಯವಾಗಿ ಕಸಡಪ್ಪಿಂಗ್ ಯಾರ್ಡ್‍ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಪದೇ ಪದೇ ಅಪಘಾತ ಸಂಭವಿಸುವ ಬ್ಲಾಕ್ ಸ್ಪಾಟ್‍ಗಳನ್ನು ಗುರುತಿಸಿ ಅಪಘಾತಕ್ಕೆ ಕಾರಣಗಳನ್ನು ಪತ್ತೆಮಾಡಿ ಲೋಪವನ್ನು ಸರಿಪಡಿಸುವುದು, ರಸ್ತೆ ಉಬ್ಬುಗಳ ಸರಿಪಡಿಸುವುದು, ಸಾರಿಗೆ ಮಾರ್ಗಸೂಚಿ ಫಲಕಗಳನ್ನು ಅಳವಡಿಸಲು ಕ್ರಮವಹಿಸುವಂತೆ ಸೂಚನೆ ನೀಡಿದರು.
ಹೆದ್ದಾರಿ ಮಾರ್ಗದಲ್ಲಿ ಈಗಾಗಲೇ ಗುರುತಿಸುವ ಏಳು ಬ್ಲಾಕ್ ಸ್ಪಾಟ್‍ಗಳಲ್ಲಿ ಹೆಚ್ಚಿನ ಸುರಕ್ಷತೆಗೆ ಕ್ರಮವಹಿಸಬೇಕು.ದುರಸ್ತಿ ಕಾರ್ಯ, ಸಂಚಾರಿ ಸಿಗ್ನಲ್‍ಗಳ ಅಳವಡಿಕೆ ಸೇರಿದಂತೆ ಹೆಚ್ಚಿನ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಆಗುತ್ತಿರುವ ರಸ್ತೆ ಅಪಘಾತಗಳ ವಿಶ್ಲೇಷಣೆ, ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ದತ್ತಾಂಶಗಳನ್ನು ಸಂಗ್ರಹಿಸಿ ವಿಶ್ಲೇಷಿಸಿ ಸೂಕ್ತ ಕ್ರಮಕೈಗೊಳ್ಳುವುದು, ಸಾರ್ವಜನಿಕರಲ್ಲಿ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮತ್ತು ಅರಿವಿನ ಕಾರ್ಯಕ್ರಮಗಳನ್ನು ಮೂಡಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೆಬೀಹಾಳ, ನಗರಾಭಿವೃದ್ಧಿ ಯೋಜನಾಧಿಕಾರಿ ಯೋಜನಾ ನಿರ್ದೇಶಕ ವಿರಕ್ತಿಮಠ, ಹಾವೇರಿ, ರಾಣೇಬೆನ್ನೂರು ನಗರಸಭೆ ಪೌರಾಯುಕ್ತರು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು