ಹಾವೇರಿ : ಎರಡು ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ.ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಕಡೂರು ಬಳಿ ಅಪಘಾತ ಸಂಭವಿಸಿದೆ. ಮೆಕ್ಕೆಜೋಳ ತುಂಬಿದ್ದ ಲಾರಿ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ.
ಅಪಘಾತ ತೀವ್ರತೆಗೆ ಎರಡು ಕಾರುಗಳು ಜಕಂಗೊಂಡಿದೆ. ಇನ್ನು ಮಕ್ಕಳಿಬ್ಬರು ಸೇರಿ ನಾಲ್ವರು ಮೃತಪಟ್ಟಿದ್ದು ಮಕ್ಕಳ ಮೃತದೇಹವನ್ನು ತಬ್ಬಿ ಪೋಷಕರು ಅಳುತ್ತಿರುವ ದೃಶ್ಯ ಮನಕಲಕುವಂತಿದೆ. ರಟ್ಟೀಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.