Categories: ಹಾವೇರಿ

ಹಾವೇರಿ: ಕೇಂದ್ರ ನೆರೆ ಪರಿಹಾರ ತಂಡ ಹಾನಿ ಪ್ರದೇಶಕ್ಕೆ ಭೇಟಿ-ಶಾಶ್ವತ ಪರಿಹಾರಕ್ಕೆ ರೈತರ ಮನವಿ

ಹಾವೇರಿ: ಕೇಂದ್ರ ನೆರೆ ಅಧ್ಯಯನ ತಂಡ ಭಾನುವಾರ ಹಾವೇರಿ ಜಿಲ್ಲೆಯ ಅತಿವೃಷ್ಟಿ ಹಾಗೂ ನೆರೆಯಿಂದ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ವಾಸ್ತವಾಂಶ ಕುರಿತಂತೆ ಪರಿಶೀಲನೆ ನಡೆಸಿತು.
ಭಾರತ ಸರ್ಕಾರದ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಮಂತ್ರಾಲಯದ ಮುಖ್ಯ ಅಭಿಯಂತರರಾದ ಎಸ್.ವಿ.ಜಯಕುಮಾರ ಹಾಗೂ ಗ್ರಾಮೀಣ ಅಭಿವೃದ್ಧಿ ಮಂತ್ರಾಲಯದ ಅಪರ ಕಾರ್ಯದರ್ಶಿ ಕೈಲಾಶ್ ಸಂಖ್ಲಾ ಹಾಗೂ ರಾಜ್ಯ ಸರ್ಕಾರದ ಲೈಸನಿಂಗ್ ಅಧಿಕಾರಿ ಶ್ರೀನಿವಾಸ ರೆಡ್ಡಿ ಅವರನ್ನೊಳಗೊಂಡ ಅಧ್ಯಯನ ತಂಡ ಜಿಲ್ಲೆಯ ಎಂಟು ತಾಲೂಕುಗಳ ಆಯ್ದ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು.

ಬಂಕಾಪುರದ ಮುನವಳ್ಳಿ ದುರ್ಗಾದೇವಿ ದೇವಾಲಯದ ಸಮೀಪ ವರದಾ ನದಿಯ ಪ್ರವಾಹದಿಂದ ಹಾನಿಯಾಗಿರುವ ಮೆಕ್ಕೆಜೋಳ ತಾಕಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಂಕಾಪುರ ಪಟ್ಟಣದ ಕೊಟ್ಟಿಗೇರಿಯ ಫಕ್ಕೀರಪ್ಪ ರಾಮಪ್ಪ ಮುನವಳ್ಳಿಯವರ ಮನೆ ಮಳೆಯಿಂದಾಗಿ ಹಾನಿಯಾಗಿರುವ ಕುರಿತಂತೆ ಪರಿಶೀಲನೆ ನಡೆಸಿದರು.

ಕೂಡಲ ಗ್ರಾಮದಲ್ಲಿ ವರದಾ ಪ್ರವಾಹದಿಂದ ಗದಿಗೆಪ್ಪ ಫಕ್ಕೀರಪ್ಪ ಬೊಮ್ಮಕ್ಕನವರ ಎಂಟು ಎಕರೆ ಕಬ್ಬು ಬೆಳೆ ಹಾನಿ, ನಾಗನೂರ ಗ್ರಾಮದ ಚನ್ನಬಸಯ್ಯ ಹಿರೇಮಠ ಅವರ ಸೋಯಾಬಿನ್ ಬೆಳೆಹಾನಿ, ವರದಾಹಳ್ಳಿ ಗ್ರಾಮದ ತರಕಾರಿ ತಾಕುಗಳ ಹಾನಿ, ಅಡಿಕೆತೋಟ, ಮನ್ನಂಗಿ ಗ್ರಾಮದ ಚಂದ್ರಗೌಡ ಗಾಳಿಗೌಡ್ರ ಅವರ ಮೆಕ್ಕೆಜೋಳ ಹಾನಿ, ದೇವಗಿರಿಯಿಂದ ಸವಣೂರಿಗೆ ಹೋಗುವ ವರದಾ ನದಿಯ ಸೇತುವೆ ಬಳಿಯ ಜಿಲ್ಲಾ ಪಂಚಾಯತ್ ರಸ್ತೆ ಹಾನಿ, ಕುಣಿಮೆಳ್ಳಿಹಳ್ಳಿ, ಕುಡುಪಲಿ, ರಾಮತೀರ್ಥ, ಕೆರವಡಿ ಗ್ರಾಮದಲ್ಲಿ ರಸ್ತೆ, ಸೇತುವೆ ಹಾನಿಗಳ ಕುರಿತಂತೆ ಪರಿಶೀಲನೆ ನಡೆಸಿದರು. ಈ ಸ್ಥಳಗಳಲ್ಲಿ ರೈತರದಿಂದ ಹಾನಿಯ ಕುರಿತಂತೆ ಮಾಹಿತಿ ಪಡೆದುಕೊಂಡರು.

ರೈತರ ಬೇಡಿಕೆ: ಮುನವಳ್ಳಿ, ಕೂಡಲ, ನಾಗನೂರ ಹಾಗೂ ಮನ್ನಂಗಿ ಗ್ರಾಮದಲ್ಲಿ ಕೇಂದ್ರ ತಂಡಕ್ಕೆ ಮನವಿ ಸಲ್ಲಿಸಿದ ರೈತರು, ತ್ವರಿತವಾಗಿ ಪರಿಹಾರ ಬಿಡುಗಡೆಗೆ ಬೇಡಿಕೆ ಸಲ್ಲಿಸಿದರು. ಕಳೆದ ಮೂರು ವರ್ಷಗಳಿಂದ ಸತತವಾಗಿ ಅತಿವೃಷ್ಟಿಯಿಂದ ಬೆಳೆಹಾನಿಯಾಗುತ್ತಿದೆ. ರೈತರು ತೀವ್ರ ಸಂಕಷ್ಟದಲ್ಲಿರುವಾಗ ತಿಳಿಸಿದರು.

ಮುನವಳ್ಳಿ ಜಮೀನುಗಳಿಗೆ ಚಂದಾಪುರ ಸೇರಿದಂತೆ ಮೇಲಿನ 15 ಕೆರೆಗಳ ನೀರು ತುಂಬಿ ಹಳ್ಳದ ಮೂಲಕ ಹರಿದು ರೈತರ ಬೆಳೆಗೆ ನುಗ್ಗುತ್ತದೆ. ಇದು ಪ್ರತಿ ವರ್ಷ ಪುನರಾವರ್ತನೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಹಳ್ಳವನ್ನು ಅಗಲೀಕರಣಗೊಳಿಸಬೇಕು. ಆ ಮೂಲಕ ರೈತರು ನಷ್ಟ ಅನುಭವಿಸುವುದುನ್ನು ತಪ್ಪಿಸುವಂತೆ ಈ ಭಾಗದ ರೈತರು ಮನವಿ ಮಾಡಿಕೊಂಡರು.
ಕೂಡಲ ಮತ್ತು ನಾಗನೂರ ಭಾಗದ ರೈತರು ಕೇಂದ್ರ ತಂಡಕ್ಕೆ ಮನವಿ ಮಾಡಿಕೊಂಡು ವರದಾ ನದಿಯಿಂದ ರೈತರ ಹೊಲಗಳಿಗೆ ನೀರು ನುಗ್ಗುವುದನ್ನು ತಪ್ಪಿಸಲು ನದಿಗೆ ತಡೆಗೋಡೆ ನಿರ್ಮಿಸುವಂತೆ ಮನವಿ ಮಾಡಿಕೊಂಡರು.

ಮನ್ನಂಗಿ ಗ್ರಾಮದ ರೈತರು ವರದಾ ನದಿಗೆ ದೇವಗಿರಿ ಸಮೀಪ ನಿರ್ಮಿಸಲಾದ ಸೇತುವೆಯ ಸಂಪರ್ಕ ರಸ್ತೆಯು ಪ್ರವಾಹದ ನೀರು ತಡೆಯುವ ಗೋಡೆಯಂತಾಗಿ ಸಾವಿರಾರು ಎಕರೆ ಜಮೀನಿಗೆ ನೀರು ನುಗ್ಗಿ ಪ್ರತಿ ವರ್ಷ ರೈತರು ಬೆಳೆ ನಷ್ಟ ಅನುಭವಿಸುತ್ತಿದಾರೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ವರದಾ ಸೇತುವೆ ಸಂಪರ್ಕಿಸುವ ಜಿಲ್ಲಾ ಪಂಚಾಯತ್ ನಿರ್ಮಾಣದ ತಡೆಗೋಡೆಯಂತಾಗಿರುವ ರಸ್ತೆಯ ಕೆಳಗೆ ನೀರು ಹರಿಯಲು ಬ್ಲಾಕ್‍ಗಳನ್ನು ನಿರ್ಮಿಸುವಂತೆ ಮನವಿ ಮಾಡಿಕೊಂಡರು.

ರೈತರ ಬೇಡಿಕೆಗಳನ್ನು ಕೇಂದ್ರ ತಂಡದ ಭಾರತ ಸರ್ಕಾರದ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಮಂತ್ರಾಲಯದ ಮುಖ್ಯ ಅಭಿಯಂತರರಾದ ಎಸ್.ವಿ.ಜಯಕುಮಾರ, ಗ್ರಾಮೀಣ ಅಭಿವೃದ್ಧಿ ಮಂತ್ರಾಲಯದ ಅಪರ ಕಾರ್ಯದರ್ಶಿ ಕೈಲಾಶ್ ಸಂಖ್ಲಾ ಹಾಗೂ ರಾಜ್ಯ ಸರ್ಕಾರದ ಲೈಸನಿಂಗ್ ಅಧಿಕಾರಿ ಶ್ರೀನಿವಾಸ ರೆಡ್ಡಿ ಅವರು ರೈತರ ಕುಂದುಕೊರತೆಗಳನ್ನು ಸಮಚಿತ್ತದಿಂದ ಆಲಿಸಿ ಈ ಕುರಿತಂತೆ ಗಮನಸೆಳೆಯುವುದಾಗಿ ತಿಳಿಸಿದರು.

ರೂ.38 ಕೋಟಿ ಪರಿಹಾರಕ್ಕೆ ಬೇಡಿಕೆ: ಹಾನಿ ಪ್ರದೇಶಕ್ಕೆ ಭೇಟಿಯ ಮುನ್ನ ಕೇಂದ್ರ ತಂಡ ಶಿಗ್ಗಾಂವ ತಾಲೂಕು ತಹಶೀಲ್ದಾರ ಕಚೇರಿಯಲ್ಲಿ ಜಿಲ್ಲೆಯ ಅಧಿಕಾರಿಗಳಿಂದ ಹಾನಿಯ ಕುರಿತಂತೆ ಮಾಹಿತಿ ಪಡೆದುಕೊಂಡಿತು.

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಕೇಂದ್ರ ತಂಡಕ್ಕೆ ಅತಿವೃಷ್ಟಿಯಿಂದ ಉಂಟಾದ ಪ್ರವಾಹ ಹಾಗೂ ಹಾನಿಯ ಮಾಹಿತಿಯನ್ನು ಪವರ್ ಪಾಯಿಂಟ್ ಪ್ರಜೆಂಟೇಷನ್ ಮೂಲಕ ಮನವರಿಕೆ ಮಾಡಿಕೊಟ್ಟರು. ಜುಲೈ ತಿಂಗಳಲ್ಲಿ ವಿಶೇಷವಾಗಿ 23 ರಿಂದ 25ರವರೆಗೆ ಸುರಿದ ಭಾರಿ ಮಳೆಯಿಂದಾಗಿ ಮನೆಹಾನಿ, ಬೆಳೆಹಾನಿ ಹಾಗೂ ಮೂಲಸೌಕರ್ಯಗಳ ಹಾನಿಗೆ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ರೂ.38 ಕೋಟಿ ಪರಿಹಾರದ ಬೇಡಿಕೆಯನ್ನು ಸಲ್ಲಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಬೆಳೆಹಾನಿಗೆ ರೂ.8.97 ಕೋಟಿ ಪರಿಹಾರ ಅಗತ್ಯವಾಗಿದೆ. ರಸ್ತೆ, ಸೇತುವೆ, ಕಟ್ಟಡ, ಕುಡಿಯುವ ನೀರಿನ ಸಂಪರ್ಕ ಹಾನಿ ಒಳಗೊಂಡಂತೆ ರೂ.28.96 ಕೋಟಿ ಪರಿಹಾರದ ಅಗತ್ಯವಿದೆ ಎಂದು ಮಾಹಿತಿ ನೀಡಿದರು.

ವಾಸ್ತವ ಹಾನಿ: ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ 8329.68 ಹೆಕ್ಟೇರ್ ಪ್ರದೇಶದ ಅಂದಾಜು ರೂ.23.99 ಕೋಟಿ ಮೊತ್ತದ ಕೃಷಿ ಬೆಳೆಹಾನಿ, 1406.55 ಹೆಕ್ಟೇರ್ ಪ್ರದೇಶದ ಅಂದಾಜು ರೂ.5.31 ಕೋಟಿ ಮೊತ್ತದ ತೋಟಗಾರಿಕೆ ಬೆಳೆಹಾನಿಯಾಗಿದೆ. 55 ಹೆಕ್ಟೇರ್ ಪ್ರದೇಶದ ಕೃಷಿ ಭೂಮಿಯಲ್ಲಿ ಹೂಳು ತುಂಬಿದೆ. ಒಟ್ಟಾರೆ 9791.23 ಹೆಕ್ಟೇರ್ ಹಾನಿಯಾಗಿದ್ದು, ರೂ.29.36 ಕೋಟಿ ಬೆಳೆ ನಷ್ಟ ಉಂಟಾಗಿದೆ. ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ರೂ.8.97 ಕೋಟಿ ಪರಿಹಾರ ಅಗತ್ಯವಾಗಿದೆ ಎಂದು ಹೇಳಿದರು.

Sampriya YK

Recent Posts

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

30 seconds ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

10 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

21 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

40 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

50 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago