News Karnataka Kannada
Saturday, May 11 2024
ಹಾವೇರಿ

ಹಾವೇರಿ ಸಮ್ಮೇಳನದ ಪ್ರತಿನಿಧಿಗಳ ನೋಂದಣಿ ಅವಧಿ ವಿಸ್ತರಣೆ ಹಾಗೂ ನೇರ ನೋಂದಣಿಗೆ ಅವಕಾಶ

Extension of registration period of delegates of Haveri Conference and provision for direct registration
Photo Credit : By Author

ಹಾವೇರಿ: ಹಾವೇರಿಯಲ್ಲಿ ನಡೆಯಲಿರುವ ೮೬ ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಯಾಗಿ ಭಾಗವಹಿಸುವವರಿಗೆ ಆಪ್ ಮೂಲಕ ದಿನಾಂಕ 18-12- 2022 ರವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿತ್ತು.

ಆದರೂ ಮಾಧ್ಯಮಗಳಲ್ಲಿ, ಕ್ಲಬ್ ಹೌಸ್ನಲ್ಲಿ ಕನ್ನಡಾಭಿಮಾನಿಗಳು, ಆಸಕ್ತರು, ಕಲಾವಿದರು, ಜನಪದ ಕಲಾವಿದರು ಸೇರಿ ಹಲವರು, ಗ್ರಾಮಾಂತರ ಪ್ರದೇಶಗಳಲ್ಲಿ ಆನ್ ಲೈನ್ ಮೂಲಕ ನೋಂದಣಿ ಮಾಡುವುದಕ್ಕೆ ಸಮಸ್ಯೆಗಳು ಎದುರಾಗುತ್ತಿದೆ. ಇಂಟರ್ನೆಟ್ ಸಮಸ್ಯೆ, ವಿದ್ಯುತ್ ಸಮಸ್ಯೆ ಹಾಗೂ ಕೆಲವರಿಗೆ ಆನ್ ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳುವುದಕ್ಕೆ ವ್ಯತ್ಯಯ ಆಗುತ್ತಿದೆ. ಇನ್ನೂ ಬಹುತೇಕರಲ್ಲಿ ಸ್ಮಾರ್ಟ್ ಪೋನ್ ಇಲ್ಲದಿರುವುದರಿಂದ ಸಮ್ಮೇಳನದ ಪ್ರತಿನಿಧಿಯಾಗಿ ನೋಂದಣಿ ಮಾಡಿಕೊಳ್ಳುವುದಕ್ಕೆ ಕಷ್ಟವಾಗುತ್ತಿದೆ ಎಂದು ಮನವಿ ಮಾಡಿಕೊಂಡಿಕೊಂಡಿರುವುದನ್ನು ನಮ್ಮ ರಾಜ್ಯಾಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಗಮನಿಸಿ , ಕನ್ನಡದ ಅಕ್ಷರ ಜಾತ್ರೆಯಲ್ಲಿ ಭಾಗವಹಿಸುವವರಿಗೆ ಯಾವುದೇ ತೊಂದರೆ ಆಗಬಾರದು ಎನ್ನುವ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿ, ಜಿಲ್ಲಾ ಕಚೇರಿಯಲ್ಲಿ ನೇರವಾಗಿ (ಆಫ್ ಲೈನ್) ನೋಂದಣಿಗೆ ಅವಕಾಶ ಕಲ್ಪಿಸಿ, ಡಿಸೆಂಬರ್ 18ರ ವರೆಗೆ ಇದ್ದ ಪ್ರತಿನಿಧಿಗಳ ನೋಂದಣಿ ಅವಧಿಯನ್ನು ಡಿಸೆಂಬರ್ 25 ರ ವರೆಗೆ ವಿಸ್ತರಣೆ ಮಾಡಿದ್ದಾರೆ.

ಕೊಡಗು ಜಿಲ್ಲೆಯಿಂದ ಸಮ್ಮೇಳನದ ಪ್ರತಿನಿಧಿಯಾಗಿ ಭಾಗವಹಿಸುವವರು ಮಡಿಕೇರಿಯ ಸುದರ್ಶನ ವೃತ್ತದ ಬಳಿ ಇರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ 500.00(ಐದುನೂರು) ರೂ. ನೀಡಿ ರಶೀದಿ ಪಡೆಯಬಹುದು. ಅಥವಾ ಮೊಬೈಲ್ ಸಂಖ್ಯೆ 9448346276 ಅನ್ನು ಸಂಪರ್ಕಿಸಿ.

ಹಾವೇರಿಯಲ್ಲಿ ವಸತಿ ವ್ಯವಸ್ಥೆ ಗಮನದಲ್ಲಿ ಇಟ್ಟುಕೊಂಡು 20,000 (ಇಪ್ಪತ್ತು ಸಾವಿರ ) ಪ್ರತಿನಿಧಿಗಳಿಗೆ ಮಾತ್ರ ಅವಕಾಶ ನೀಡಲು ಪರಿಷತ್ತು ಮುಂದಾಗಿದೆ. ಆಸಕ್ತರು ಕೂಡಲೇ ನೋಂದಣಿ ಮಾಡಿಕೊಂಡು ಸಮ್ಮೇಳನದಲ್ಲಿ ಭಾಗವಹಿಸುವಂತೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂಪಿ ಕೇಶವ ಕಾಮತ್ ಮನವಿ ಮಾಡಿದ್ದಾರೆ.
TV 11 KODAGU UPDATE

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು