News Karnataka Kannada
Friday, May 03 2024
ಹಾವೇರಿ

ಹಾವೇರಿಯಲ್ಲಿ ಸರ್ಕಾರಿ ಬಸ್ ಪಲ್ಟಿಯಾಗಿ 45 ಮಕ್ಕಳಿಗೆ ಗಾಯ

Haver
Photo Credit : News Kannada

ಹಾವೇರಿ: ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. 45 ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ಘಟನೆ ನಡೆದಿದೆ.

ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದಾಗಿದೆ. ಸಣ್ಣಪುಟ್ಟ ಗಾಯಗೊಂಡ ಮಕ್ಕಳಿಗೆ ಸವಣೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ಪ್ರವಾಸ ಹಿನ್ನೆಲೆಯಲ್ಲಿ ರಾಕಗಾರ್ಡ್​ನ್​ಗೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ಸವಣೂರು ಉಪವಿಭಾಗಧಿಕಾರಿ ತಹಶಿಲ್ದಾರ ಮತ್ತಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸವಣೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು