ಹಾವೇರಿ

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಹಾವೇರಿ: ಸರ್ವಧರ್ಮಗಳ ಸಾಮರಸ್ಯದ ಬೀಡು ಹಾವೇರಿಯಲ್ಲಿ ಜ.6 ರಿಂದ ಜ.8 ರವರೆಗೆ ನೆಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ, ನಾಡ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಲಾಯಿತು.

ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ರಸ್ತೆಯ 130 ಎಕರೆ ವಿಸ್ತೀರ್ಣದ ಜಾಗದಲ್ಲಿ ಕನ್ನಡ ಗಂಧರ್ವ ಲೋಕ ಧರೆಗಿಳಿದಂತೆ ನಿರ್ಮಿಸಲಾಗಿರುವ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ ಮುಂಭಾಗದಲ್ಲಿ ಮುಂಜಾನೆ 7 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿತು.

ರಾಷ್ಟ್ರ ಧ್ವಜವನ್ನು ಕಾರ್ಮಿಕ ಇಲಾಖೆ ಹಾಗೂ ಹಾವೇರಿ ಜಿಲ್ಲಾ ಉಸ್ತವಾರಿ ಸಚಿವ ಅರೆಬೈಲು ಶಿವರಾಮ ಹೆಬ್ಬಾರ್‌, ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ‌.ಮಹೇಶ್ ಜೋಶಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ‌ ಹಿರೇಮಠ‌ ‌ನಾಡ ಧ್ವಜದ ಧ್ವಜಾರೋಹಣ ನೆರವೇರಿಸಿದರು.

ಸಂಸದ ಶಿವಕುಮಾರ್ ಉದಾಸಿ, ಶಾಸಕ ನೇಹರು ಓಲೆಕಾರ, ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿ.ಪಂ. ಸಿಇಓ ಮಹಮದ್ ರೋಷನ್, ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಸೇರಿದಂತೆ ಮತ್ತಿತರು ಇದ್ದರು.

Sneha Gowda

Recent Posts

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

9 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

26 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

47 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

1 hour ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

1 hour ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 hours ago