ಹಾವೇರಿ: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಬಿಡುಗಡೆ ಮಾಡಿದರು.
ಅ.29ರ ಶನಿವಾರ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಲಾಂಛನವನ್ನು ಬಿಡುಗಡೆ ಮಾಡಲಾಯಿತು.
ಜಿಪಂ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಪಂ ಸಿಇಒ ಮಹ್ಮದ್ ರೋಷನ್, ಶಾಸಕರಾದ ನೆಹರು ಓಲೇಕಾರ, ಅರುಣಕುಮಾರ ಪೂಜಾರ, ಮಾಜಿ ಸಚಿವ ರುದ್ರಪ್ಪ ಲಮಾಣಿ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಬಿ.ಲಿಂಗಯ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.