Categories: ಹಾವೇರಿ

ಹಾವೇರಿ: ಯಾರು ಭಾರತ್ ಜೋಡೋ ಮಾಡಿದ್ದಾರೆ, ಯಾರು ತೋಡೋ ಮಾಡಿದ್ದಾರೆಂದು ಎಲ್ಲರಿಗೂ ತಿಳಿದಿದೆ

ಹಾವೇರಿ, ಸೆಪ್ಟೆಂಬರ್ 29: ಯಾರು ಭಾರತ್ ಜೋಡೋ ಮಾಡಿದ್ದಾರೆ, ಯಾರು ತೋಡೋ ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಿ.ಬಿ. ಕೊಳ್ಳಿ ಪಾಲಿಟೆಕ್ನಿಕ್ ಕಾಲೇಜು ಮೈದಾನದ ಹೆಲಿಪ್ಯಾಡ್‍ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಭಾರತ್ ಜೋಡೋ ಫ್ಲೆಕ್ಸ್ ಗಳನ್ನು ಹರಿದುಹಾಕಿರುವ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಡಿ.ಕೆ.ಶಿವಕುಮಾರ್ ಏನಾದರೂ ಹೇಳಲಿ. ಯಾರೇ ಫ್ಲೆಕ್ಸ್ ಹಾಕಬೇಕಾದರೂ ಅನುಮತಿ ಪಡೆಯಬೇಕು. ಯಾವುದೇ ರಾಜಕೀಯ ಪಕ್ಷದ ಫ್ಲೆಕ್ಸ್ ಹರಿಯುವ ಅವಶ್ಯಕತೆ ಬಿಜೆಪಿಗೆ ಇಲ್ಲ. ಎಲ್ಲ ಜನರಿಗೂ ಎಲ್ಲಾ ವಿಚಾರಗಳು ಗೊತ್ತಿದೆ. ಹೀಗಾಗಿ ಅದರ ಅವಶ್ಯಕತೆ ಇಲ್ಲ ಎಂದು ನನ್ನ ಭಾವನೆ ಎಂದರು.

ಎಸ್.ಡಿ.ಪಿ.ಐ ಬಗ್ಗೆ ಈಗಲೇ ನಿರ್ಧಾರವಿಲ್ಲ

ಪಿ.ಎಪಿ.ಐ ನಿಷೇಧಿಸಲಾಗಿದೆ. ಹಲವಾರು ಪಾತ್ರಗಳನ್ನು ಪಡೆದುಕೊಡದ್ದಿದೆ. ಎಸ್.ಡಿ.ಪಿ.ಐ ಭಾರತ ಚುನಾವಣಾ ಆಯೋಗದಲ್ಲಿ ನೋಂದಣಿಯಾಗಿರುವ ಪಕ್ಷ. ಇದರ ನಿಷೇಧದ ಬಗ್ಗೆ ಯಾವುದೇ ನಿರ್ಧಾರ ಕೇಂದ್ರ ಸರ್ಕಾರ ತೆಗೆದುಕೊಂಡಿಲ್ಲ. ಬರುವ ದಿನಗಳ ಬೆಳವಣಿಗೆಯ ಆಧಾರದ ಮೇಲೆ ಕ್ರಮ ವಹಿಸಲಾಗುವುದು ಎಂದರು.

ಗಿಮಿಕ್ ಎನ್ನುವುದು ಸರಿಯಲ್ಲ ಪಿ.ಎಫ್.ಐ ನಿಷೇಧ ರಾಜಕೀಯ ಸ್ಟಂಟ್ ಹಾಗೂ ಚುನಾವಣಾ ಗಿಮಿಕ್ ಎಂದಿರುವ ಬಿ.ಕೆ.ಹರಿಪ್ರಸಾದ್ ಅವರಿಗೆ ಬೇರೇನೂ ವ್ಯಾಖ್ಯಾನ ಮಾಡಲು ಸಾಧ್ಯ. ಇಷ್ಟು ವರ್ಷ ವಿಧ್ವಂಸಕ ಕೃತ್ಯಗಳು ನಮ್ಮೆದುರಿಗೆ ನಡೆದಿದೆ. ಕೊಲೆ, ಭಯೋತ್ಪಾದನೆ ಚಟುವಟಿಗೆ ಬೆಂಬಲ ನೀಡಿದ್ದಾರೆ. ಇದೆ ಕಾಂಗ್ರೆಸ್ ವಿಧಾನ ಸಭೆ ಒಳಹೊರಗೆ ನಿಷೇಧಿಸಿ ಅಂತ ಹೇಳುತ್ತಿದ್ದವರು, ಈಗ ಗಿಮಿಕ್ ಎಂದು ಕರೆಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಹರಿಪ್ರಸಾದ್ ಯೋಚಿಸಬೇಕು ಎಂದರು.

ಕನ್ನಡ ಭವನಕ್ಕೆ ಎರಡು ಎಕರೆ ಸ್ಥಳ ನಿಗದಿ ಮಾಡಲು ಗೋವಾ ಮುಖ್ಯ ಮಂತ್ರಿಗಳಿಗೆ ಪತ್ರ ಬರೆಯಲಾಗಿದೆ ಹಾಗೂ ಅವರೊಂದಿಗೆ ಮಾತನಾಡಲಾಗಿದೆ. ಸ್ಥಳ ನಿಗದಿ ಮಾಡುವುದಾಗಿ ಹೇಳಿದ್ದಾರೆ ಎಂದರು.

ಸಾಹಿತಿಗಳು ಎರಡೂ ಕಡೆ ಇದ್ದಾರೆ ಭಾರತ್ ಜೋಡೋ ಕಾರ್ಯಕ್ರಮಕ್ಕೆ ಸಾಹಿತಿಗಳ ಬೆಂಬಲ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ದೇಶದಲ್ಲಿ ಸಾಹಿತಿಗಳು ಎರಡೂ ಕಡೆ ಇದ್ದಾರೆ. ಹಾಗಾಗಿ ಕೆಲವರು ಅಲ್ಲಿ, ಕೆಲವರು ಇಲ್ಲಿ ಬೆಂಬಲ ನೀಡುತ್ತಾರೆ ಎಂದರು.

ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ

ನವೆಂಬರ್ ನಲ್ಲಿ ನಡೆಯಲಿರುವ ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ಸಿದ್ಧತೆಗಳು ನಡೆಯುತ್ತಿದೆ. ಅದ್ದೂರಿಯಾಗಿ ಸಮ್ಮೇಳನ ಮಾಡಿ ತೀರುತ್ತೇವೆ ಎಂದರು.

ಕಾರ್ಯಕ್ರಮಗಳಿಗೆ ಚಾಲನೆ

ಕೆಎಂಎಫ್ ಕಚೇರಿ ಉದ್ಘಾಟನೆ ಹಾಗೂ ಮೆಗಾ ಡೈರಿ ಶಂಕು ಸ್ಥಾಪನೆ ಪ್ರಮುಖ ಕಾರ್ಯಕ್ರಮ. ಹಾಲು ಉತ್ಪಾದನೆ ಹಾಗೂ ಹಾಲು ಉತ್ಪಾದಕರಿಗೆ ಬಹಳಷ್ಟು ಅನುಕೂಲ ಕೊಡುವ ಕಾರ್ಯಕ್ರಮ ಇದಾಗಿದೆ. ಇದರ ಜೊತೆಗೆ ಹಲವಾರು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ. ಬಜೆಟ್ ನಲ್ಲಿ ಹೇಳಲಾಗಿರುವ ಕಾರ್ಯಕ್ರಮಗಳ ಪ್ರಾರಂಭವಾಗುತ್ತಿದೆ ಎಂದರು.

ಸಚಿವರಾದ ಶಿವರಾಂ ಹೆಬ್ಬಾರ್, ಬಿ.ಸಿ. ಪಾಟೀಲ್, ಸಂಸದ ಶಿವಕುಮಾರ್ ಉದಾಸಿ, ಶಾಸಕ ನೆಹರೂ ಓಲೇಕಾರ್, ಮಾಜಿ ಶಾಸಕ ಮಹಿಮಾ ಪಟೇಲ್ ಮೊದಲಾದವರು ಉಪಸ್ಥಿತರಿದ್ದರು.

Ashika S

Recent Posts

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

18 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

45 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

53 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

53 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 hour ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

1 hour ago