News Karnataka Kannada
Thursday, April 25 2024
ಹಾವೇರಿ

ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಯುವತಿಯನ್ನು ಕಿಡ್ನ್ಯಾಪ್ ಮಾಡಿದ ಪ್ರೇಮಿ

ಹಾವೇರಿಯ  ಹಳೆಯ ಪೋಸ್ಟ್ ಆಫೀಸ್ ಬಳಿ ಬಿಎಡ್ ವಿದ್ಯಾರ್ಥಿನಿಯೊಬ್ಬಳು ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ  ಪ್ರೇಮಿಯೊಬ್ಬ ಆಕೆಯನ್ನು ಕಿಡ್ನ್ಯಾಪ್ ಮಾಡಿದ ಘಟನೆ ನಡೆದಿದೆ.
Photo Credit : News Kannada

ಹಾವೇರಿ: ಹಾವೇರಿಯ  ಹಳೆಯ ಪೋಸ್ಟ್ ಆಫೀಸ್ ಬಳಿ ಬಿಎಡ್ ವಿದ್ಯಾರ್ಥಿನಿಯೊಬ್ಬಳು ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ  ಪ್ರೇಮಿಯೊಬ್ಬ ಆಕೆಯನ್ನು ಕಿಡ್ನ್ಯಾಪ್ ಮಾಡಿದ ಘಟನೆ ನಡೆದಿದೆ.

ಯುವತಿಯನ್ನು ಅಪಹರಿಸಿದ ಆರೋಪಿಯನ್ನು, ವಿಷ್ಣು ತಗಡಿನಮನಿ ಎಂದು ಗುರುತಿಸಲಾಗಿದೆ.

ಯುವತಿ ಕಾಲೇಜ್‍ಗೆ ತೆರಳುತ್ತಿದ್ದ ವೇಳೆ, ಕಾರಿನಲ್ಲಿ ಬಂದ ವಿಷ್ಣು ಆಕೆಯನ್ನು ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಯುವತಿ ರಕ್ಷಣೆಗೆ ತೆರಳಿದ್ದಾರೆ. ಇದನ್ನು ಅರಿತ ಆರೋಪಿ, ಯುವತಿಯನ್ನು ಮೋಟೆಬೆನ್ನೂರು ಬಳಿ ಬಿಟ್ಟು ಎಸ್ಕೇಪ್ ಆಗಿದ್ದಾನೆ.

ಬಳಿಕ ಫೋನ್ ಟ್ರ್ಯಾಕ್ ಮಾಡಿ ಪೊಲೀಸರು ಯುವತಿಯನ್ನು ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಆರೋಪಿ ವಿರುದ್ಧ ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದೆ.  ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು