News Karnataka Kannada
Monday, April 29 2024
ಹಾವೇರಿ

ಪಾಕಿಸ್ತಾನ ಪರ ಘೋಷಣೆ: ನಾಸೀರ್‌ ಹುಸೇನ್‌ ಬೆಂಬಲಿಗನ ವಿಚಾರಣೆ

‘ಪಾಕಿಸ್ತಾನ ಜಿಂದಾಬಾದ್‌’  ಘೋಷಣೆಯ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ರಾಜ್ಯಸಭಾ ಸದಸ್ಯ ನಾಸೀರ್‌ ಹುಸೇನ್‌ ಬೆಂಬಲಿಗನನ್ನು ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದಾರೆ.
Photo Credit : News Kannada

ಹಾವೇರಿ:  ‘ಪಾಕಿಸ್ತಾನ ಜಿಂದಾಬಾದ್‌’  ಘೋಷಣೆಯ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ರಾಜ್ಯಸಭಾ ಸದಸ್ಯ ನಾಸೀರ್‌ ಹುಸೇನ್‌ ಬೆಂಬಲಿಗನನ್ನು ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದಾರೆ.

ನಿನ್ನೆ ತಡರಾತ್ರಿ ರಾಜ್ಯಸಭಾ ಸದಸ್ಯ ನಾಸೀರ್‌ ಹುಸೇನ್‌ ಅವರ ಬೆಂಬಲಿಗ ಮಹಮ್ಮದ್‌ ಶಫಿ ನಾಶಿಪುಡಿ ಎಂಬ ವ್ಯಕ್ತಿಯನ್ನು ಧ್ವನಿ ಪರೀಕ್ಷೆಗಾಗಿ ಪೊಲೀಸರು ಕರೆದೊಯ್ದಿದ್ದಾರೆ.

ಮಹಮ್ಮದ್‌ ಶಫಿ ನಾಶಿಪುಡಿ ಬ್ಯಾಡಗಿ ಮೆಣಸಿಕಾಯಿ ವರ್ತಕರಾಗಿದ್ದಾರೆ. ಬ್ಯಾಡಗಿ ತಾಲೂಕು ಮೋಟೆಬೆನ್ನೂರ ಬಳಿಯಿರುವ ತಮ್ಮ ಎಸ್ ಎ ಎನ್ ಕೋಲ್ಡ್ ಸ್ಟೋರೇಜ್‌ನಲ್ಲಿದ್ದರು, ಅಲ್ಲಿಂದ ಪೊಲೀಸರು ವಿಚಾರಣೆಗೆ ಕರೆತಂದಿದ್ದಾರೆ.

ಪ್ರಕರಣ ಸಂಬಂಧ ಸ್ಪಷ್ಟನೆ ನೀಡಿರುವ ಮಹಮ್ಮದ್‌ ಶಫಿ, ನಾನು ನಾಸೀರ್ ಸಾಬ್ ಜಿಂದಾಬಾದ್ ಎಂದು ಕೂಗಿದ್ದೇನೆ. ನನ್ನ ತಾಯಾಣೆಗೂ ಆ ರೀತಿ ದೇಶದ್ರೋಹಿ ಘೋಷಣೆ ಕೂಗಿಲ್ಲ. ಯಾವ ತನಿಖೆಗೂ ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು