ಹಾವೇರಿ: ಶ್ರೀ ರಾಮಸೇನೆ ರಾಷ್ಟ್ರೀಯ ಗೌರವಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮೀಜಿ ಅವರನ್ನು ನೇಮಕ ಮಾಡಲಾಗಿದೆ. ಇಂದು (ಜುಲೈ 30) ಹಾವೇರಿ ಜಿಲ್ಲೆ ಸವಣೂರು ತಾಲೂಕು ಕಾರಡಗಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀರಾಮ ಸೇನಾ ಪ್ರಾಂತ ಅಭ್ಯಾಸ ವರ್ಗದಲ್ಲಿ ಘೋಷಣೆ ಮಾಡಲಾಗಿದೆ. ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷರಾಗಿ ಪ್ರಮೋದ್ ಮುತಾಲಿಕ್ ಮುಂದುವರಿಯಲಿದ್ದಾರೆ.
ಇನ್ನು ಶ್ರೀರಾಮಸೇನೆ ರಾಜ್ಯಾಧ್ಯಕ್ಷರಾಗಿದ್ದ ಸಿದ್ದಲಿಂಗ ಸ್ವಾಮೀಜಿ ಸ್ಥಾನಕ್ಕೆ ಗಂಗಾಧರ ಕುಲಕರ್ಣಿ ಅವರನ್ನು ನೇಮಕ ಮಾಡಿ ಪ್ರಮೋದ್ ಮುತಾಲಿ ಘೋಷಣೆ ಮಾಡಿದರು.
ಶ್ರೀ ರಾಮಸೇನೆ ರಾಷ್ಟ್ರೀಯ ಗೌರವಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಸಿದ್ಧಲಿಂಗ ಸ್ವಾಮಿ, ಯಾವಾಗ ಬಿಜೆಪಿ ರಾಜ್ಯಾಧ್ಯಕ್ಷರ ಕಾರು ಅಲ್ಲಾಡಿತ್ತೋ ಹಾಗೂ 2023ರ ವಿಧಾನಸಭೆ ಚುನಾವಣೆಯಲ್ಲಿ ಹಿನಾಯವಾಗಿ ಸೋಲು ಅನುಭವಿಸಿದಾಗ ಬಿಜೆಪಿಗೆ ಕಾರ್ಯಕರ್ತರು ಮತ್ತು ಹಿಂದುತ್ವದ ಬೆಲೆ ಗೊತ್ತಾಗಿದೆ ಎಂದರು.