Categories: ಹಾವೇರಿ

ನಾಳೆಯಿಂದಲೇ ಕೆಲ ಜಿಲ್ಲೆಗಳಲ್ಲಿ ಅಂಗನವಾಡಿ ಶಾಲೆಗಳ ಸಮಯ ಬದಲಾವಣೆ

ಕುಮಾರಪಟ್ಟಣ: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು, ಅಂಗನವಾಡಿ ಕೇಂದ್ರಗಳಲ್ಲಿ ಬಿಸಿಲಿನ ಝಳಕ್ಕೆ ಮಕ್ಕಳು ನಲಗುವಂತಾಗಿದೆ. ಈ ಕಾರಣದಿಂದಾಗಿ ರಾಜ್ಯ ಸರ್ಕಾರ ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ ಮಾಡಿದೆ.

ಬೆಳಿಗ್ಗೆ 9.30ರಿಂದ ಮಧ್ಯಾಹ್ನ 4 ಗಂಟೆವರೆಗೆ ನಿಗದಿಪಡಿಸಿದ್ದ ಸಮಯವನ್ನು ಏಪ್ರಿಲ್‌ ಮತ್ತು ಮೇ ತಿಂಗಳಿಗೆ ಅನ್ವಯವಾಗುವಂತೆ ಬೆಳಿಗ್ಗೆ 8 ರಿಂದ ಮಧ್ಯಾಹ್ನ 12ರ ವರೆಗೆ ನಡೆಸುವಂತೆ ಸಮಯ ಬದಲಾಯಿಸಿ ಆದೇಶ ಹೊರಡಿಸಿದೆ. ಇದೇ ಆದೇಶವನ್ನು ಹಾವೇರಿ ಜಿಲ್ಲೆಗೂ ವಿಸ್ತರಿಸಬೇಕು ಎಂದು ಸ್ವಾ–ಕರವೇ ರಾಜ್ಯ ಘಟಕದ ಅಧ್ಯಕ್ಷ ನಿತ್ಯಾನಂದ ಕುಂದಾಪುರ ಒತ್ತಾಯಿಸಿದ್ದಾರೆ.

ಬಿಸಿಲಿನ ತಾಪ ಹೆಚ್ಚಾದ ಹಿನ್ನೆಲೆಯಲ್ಲಿ ಏ.15ರಿಂದ ಜಿಲ್ಲೆಯಾದ್ಯಂತ ಬೆ.8ರಿಂದ ಮಧ್ಯಾಹ್ನ 12ಗಂಟೆವರೆಗೆ ಅಂಗನವಾಡಿಗಳನ್ನು ನಡೆಸುವಂತೆ ಸರ್ಕಾರ ಆದೇಶ ಹೊರಡಿಸಿದೆ ಎಂದು ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ ಅಲದರ್ತಿ ತಿಳಿಸಿದರು.

 

Chaitra Kulal

Recent Posts

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

20 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

29 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

31 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

51 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

1 hour ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

1 hour ago