ಹಾವೇರಿ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಅಯೋಧ್ಯೆ ರಾಮಮಂದಿರ ಬಳಿ ಮಹರ್ಷಿ ವಾಲ್ಮೀಕಿ ಮಂದಿರ ನಿರ್ಮಾಣವಾಗಬೇಕು. ಮಹರ್ಷಿ ವಾಲ್ಮೀಕಿ ರಾಮಾಯಣ ಗ್ರಂಥ ರಚಿಸಿದ್ದಾರೆ. ಅಯೋಧ್ಯೆ ಏರ್ಪೋರ್ಟ್ಗೆ ಮಹರ್ಷಿ ವಾಲ್ಮೀಕಿ ಹೆಸರಿಟ್ಟಿದ್ದನ್ನು ಸ್ವಾಗತಿಸುವೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಖುಷಿ ತಂದಿದೆ. ಇದು ಭಾರತೀಯರ ಬಹುದಿನದ ಕನಸಾಗಿತ್ತು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಖುಷಿ ತಂದಿದೆ. ದೇಶದಲ್ಲಿ ಬಹಳಷ್ಟು ಮಂದಿರಗಳು ಇವೆ ಈಗ ರಾಮ ಮಂದಿರ ಸೇರ್ಪಡೆಯಾಗುತ್ತಿದೆ. ಇನ್ನು ಬಿಜೆಪಿ ರಾಜಕೀಯವಾಗಿ ಲಾಭ ಪಡೆಯುತ್ತಿರುವ ವಿಚಾರವಾಗಿ ಮಾತನಾಡಿದ ಅವರು ರಾಜಕೀಯ ಎಲ್ಲಿ ಇಲ್ಲಾ ಹೇಳಿ? ಎಲ್ಲ ಕಡೆ ಇದೆ. ಅದು ಲಾಭ ಆಗುತ್ತೋ ನಷ್ಟವಾಗುತ್ತೋ ಚುನಾವಣೆ ನಂತರ ತಿಳಿಯುತ್ತೆ ಎಂದರು.
ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದ ಹಿಜಾಬ್ ವಿಚಾರವಾಗಿ ಮಾತನಾಡಿದ ಅವರು ಹಿಜಾಬ್ ವಿಚಾರದಲ್ಲಿ ಸರ್ಕಾರ ಯಾವುದೇ ಆದೇಶ ಮಾಡಿಲ್ಲ. ಮಾಡುತ್ತೆನೆ ಅಂಥಾ ಹೇಳಿದರು ಆದರೆ ಅದು ಕಾನೂನಿನಲ್ಲಿ ಇಲ್ಲ. ಹಿಜಾಬ್ ಧರಿಸುವುದು, ಬಿಡುವುದು ಅವರಿಗೆ ಬಿಟ್ಟ ವಿಷಯ. ನಡೆದುಕೊಂಡು ಬಂದಿದೆ ನಡೆದುಕೊಂಡು ಹೋಗಲಿ ಎಂದು ಜಾರಿಕೊಂಡರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ