News Karnataka Kannada
Sunday, May 12 2024
ಬೆಳಗಾವಿ

ರಾಕ್ಷಸನಂತೆ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

Chaild
Photo Credit : NewsKarnataka

ಬೆಳಗಾವಿ: ಸಾಲದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆಯುತ್ತಿದ್ದ ಜಗಳದಲ್ಲಿ ವ್ಯಕ್ತಿಯೊಬ್ಬ ಮೂರು ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು, ತುಳಿದು ಹತ್ಯೆ ಮಾಡಿರುವ ಅಮಾನುಷ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾ| ಬುರ್ಲಟ್ಟಿಯಲ್ಲಿ ನಡೆದಿದೆ. ಘಟನೆಯಿಂದಾಗಿ ಎಲ್ಲೆಡೆ ಆಕ್ರೋಶ ಕೂಡ ವ್ಯಕ್ತವಾಗಿದೆ.

ಬುರ್ಲಟ್ಟಿ ಗ್ರಾಮದ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ ಮಗು. ಜೋತಿಭಾ ತುಕಾರಾಮ ಬಾಬಾಬರ ಮಗು ಕೊಂದ ವ್ಯಕ್ತಿ. ಮಗುವಿನ ತಂದೆ ಕಾಡಪ್ಪ ಕಾಳಪಾಟೀಲಗೆ ಕಳೆದ ವರ್ಷ ಜೋತಿಭಾ ಬಾಬಾಬರ ₹50 ಸಾವಿರ ಸಾಲ ನೀಡಿದ್ದ. ಈ ಹಣವನ್ನು ವಾಪಸ್‌ ನೀಡುವಂತೆ ಕಾಳಪ್ಪನಿಗೆ ಕೇಳಿದಾಗ. ಶನಿವಾರ ಬೆಳಗ್ಗೆ ಜೋತಿಭಾ ಕಾಳಪ್ಪನ ಮನೆ ಮುಂದೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ಇದರಿಂದಾಗಿ ಇಬ್ಬರ ನಡುವೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾನೆ ಎಂದು ಮೃತಪಟ್ಟ ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು