Bengaluru 24°C

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಕಾರು ಅಪಘಾತ: ಅಪರಿಚಿತ ಟ್ರಕ್ ಡ್ರೈವರ್ ವಿರುದ್ಧ ದೂರು ದಾಖಲು

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಸಂಬಂಧಿಸಿ ಅಪರಿಚಿತ ಟ್ರಕ್ ಡ್ರೈವರ್ ವಿರುದ್ಧ ದೂರು ದಾಖಲಾಗಿದೆ.

ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಸಂಬಂಧಿಸಿ ಅಪರಿಚಿತ ಟ್ರಕ್ ಡ್ರೈವರ್ ವಿರುದ್ಧ ದೂರು ದಾಖಲಾಗಿದೆ.


ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲೆ ಕಿತ್ತೂರು ಪೊಲೀಸ್ ಠಾಣೆಗೆ ಸರ್ಕಾರಿ ಕಾರು ಡ್ರೈವರ್‌ ಹಿಟ್ & ರನ್ ಕೇಸ್‌ಗೆ ಸಂಬಂಧಿಸಿ ದೂರು ನೀಡಿದ್ದಾರೆ. ಈ ಕುರಿತು ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ದೂರಿನಲ್ಲಿ ಕಾರಿನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ, ಸಚಿವರ ಅಂಗರಕ್ಷಕ ಈರಪ್ಪ ಹುಣಶಿಕಟ್ಟಿ ಇದ್ದರು. ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದೆವು. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿಯ ಧಾರವಾಡ-ಬೆಳಗಾವಿ ಮಧ್ಯದ ರಾಷ್ಟ್ರೀಯ ಹೆದ್ದಾರಿ 48ರ ಮೇಲಿದ್ದೆವು.


ನಮ್ಮ ಮುಂದೆ ಲೈನ್ 1 ರಲ್ಲಿ ಹೋಗುತ್ತಿದ್ದ ಕಂಟೇನರ್ ಟ್ರಕ್ ಚಾಲಕ ಯಾವುದೇ ಮುನ್ಸೂಚನೆ ಕೊಡದೇ ಎಡಬದಿಗೆ ಬಂದ. ಆಗ ಎಡಬದಿಗೆ ತೆಗೆದುಕೊಂಡರೂ ಟ್ರಕ್ ಚಾಲಕ ಕಾರಿನ ಬಲ ಬದಿಗೆ ತಾಗಿಸಿದ. ಕಾರು ನಿಯಂತ್ರಣ ತಪ್ಪಿ ಸರ್ವೀಸ್ ರಸ್ತೆಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣ, ಗಂಭೀರ ಗಾಯಗಳಾಗಿವೆ. ಅಪಘಾತ ಮಾಡಿ ವಾಹನ ನಿಲ್ಲಿಸದೇ ಲಾರಿ ಡ್ರೈವರ್ ಹೋಗಿದ್ದಾನೆ ಎಂದು ತಿಳಿಸಲಾಗಿದೆ.


 

Nk Channel Final 21 09 2023