ಬೆಳಗಾವಿ: ರಾತ್ರೋರಾತ್ರಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ರಾಯಣ್ಣ ವೃತ್ತದ ಬಳಿ ನಡೆದಿದೆ. ರಾಯಣ್ಣ ವೃತ್ತದ ಬಳಿ ಕಟ್ಟಿದ್ದ ನಾಡಧ್ವಜಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಪುಂಡರ ಈ ಕೃತ್ಯಕ್ಕೆ ಕನ್ನಡ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುಂಡೆರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ.
ಎರಡು ವರ್ಷದ ಹಿಂದೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಹಲಸಿಯಲ್ಲಿ ಕನ್ನಡ ಬಾವುಟ ಸುಟ್ಟು ಜಗಜ್ಯೋತಿ ಬಸವೇಶ್ವರರ ಚಿತ್ರಕ್ಕೆ ಸಗಣಿ ಮೆತ್ತಿದ್ದ ಘಟನೆ ನಡೆದಿತ್ತು.