ಬೆಳಗಾವಿ: ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಿತು. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರಂದು ಮತದಾನ ನಡೆಯಲಿದೆ.
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳು ಸೇರಿವೆ. ಈ ಹಿನ್ನೆಲೆಯಲ್ಲಿ ಪ್ರಚಾರ ಇನ್ನೂ ನಡೆದಿದೆ. ರಾಜಕೀಯ ಪವರ್ ಸೆಂಟರ್ ಎನಿಸಿಕೊಂಡಿರುವ ಬೆಳಗಾವಿ ಅಖಾಡಕ್ಕೆ ಏಕಕಾಲಕ್ಕೆ ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಲಗ್ಗೆಯಿಡಲಿದ್ದಾರೆ.
ಏಪ್ರಿಲ್ 28ರ ಬೆಳಿಗ್ಗೆ 11ಕ್ಕೆ ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶ ನಡೆಸಲಿದ್ದು, ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಇದೇ ದಿನದಂದು ಬೆಳಗಾವಿ ಮತ್ತು ಚಿಕ್ಕೋಡಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.
ಚಿಕ್ಕೋಡಿ ಕ್ಷೇತ್ರ ವ್ಯಾಪ್ತಿಯ ಉಗಾರ್ ಖುರ್ದ್, ಬೆಳಗಾವಿ ಕ್ಷೇತ್ರದ ಯರಗಟ್ಟಿಯಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಸಿದ್ದರಾಮಯ್ಯ ಒಂದೇ ದಿನ ಎರಡೂ ಕ್ಷೇತ್ರಗಳಲ್ಲಿ ತಲಾ ಒಂದೊಂದು ಸಮಾವೇಶ ನಡೆಸಲಿದ್ದಾರೆ.