Categories: ಬೆಳಗಾವಿ

ಬೆಳಗಾವಿ ಅಖಾಡಕ್ಕೆ ಏಕಕಾಲಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದು ಎಂಟ್ರಿ

ಬೆಳಗಾವಿ: ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಿತು. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರಂದು ಮತದಾನ ನಡೆಯಲಿದೆ.

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳು ಸೇರಿವೆ. ಈ ಹಿನ್ನೆಲೆಯಲ್ಲಿ ಪ್ರಚಾರ ಇನ್ನೂ ನಡೆದಿದೆ. ರಾಜಕೀಯ ಪವರ್​ ಸೆಂಟರ್ ಎನಿಸಿಕೊಂಡಿರುವ ಬೆಳಗಾವಿ ಅಖಾಡಕ್ಕೆ ಏಕಕಾಲಕ್ಕೆ ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಲಗ್ಗೆಯಿಡಲಿದ್ದಾರೆ.

ಏಪ್ರಿಲ್ 28ರ ಬೆಳಿಗ್ಗೆ 11ಕ್ಕೆ ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶ ನಡೆಸಲಿದ್ದು, ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಇದೇ ದಿನದಂದು ಬೆಳಗಾವಿ ಮತ್ತು ಚಿಕ್ಕೋಡಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

ಚಿಕ್ಕೋಡಿ ಕ್ಷೇತ್ರ ವ್ಯಾಪ್ತಿಯ ಉಗಾರ್ ಖುರ್ದ್, ಬೆಳಗಾವಿ ಕ್ಷೇತ್ರದ ಯರಗಟ್ಟಿಯಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಸಿದ್ದರಾಮಯ್ಯ ಒಂದೇ ದಿನ ಎರಡೂ ಕ್ಷೇತ್ರಗಳಲ್ಲಿ ತಲಾ ಒಂದೊಂದು ಸಮಾವೇಶ ನಡೆಸಲಿದ್ದಾರೆ.

 

Ashitha S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

25 mins ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

30 mins ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

44 mins ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

1 hour ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

2 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

2 hours ago