ಬೆಳಗಾವಿ: ಮಚ್ಚೆ ಗ್ರಾಮದ ಭಾರತನಗರದ ನಿವಾಸಿಗಳ ಭಾಗದಲ್ಲಿ ಕಳೆದ ಹಲವಾರು ತಿಂಗಳಿಂದ ಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ಕುಡಿಯುವ ನೀರಿನ ಬಾವಿ ಮತ್ತು ಬೋರ್ವೇಲ್ಗಳಿಗೆ ಸೇರುತ್ತಿದೆ. ಇದರಿಂದ ಅಲ್ಲಿನ ಜನರು ಮತ್ತು ಮಕ್ಕಳು ನಿರಂತರವಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ.


ಈಗಾಗಲೇ ಸ್ಥಳೀಯ ಗ್ರಾಮ ಪಂಚಾಯತ್ ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ (ದಿನಾಂಕ: 11/06/25), ಅಧಿಕಾರಿಗಳು ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸಾಂಕ್ರಾಮಿಕ ರೋಗಗಳು ಹರಡುವ ಮೊದಲೇ ಸರ್ಕಾರ ಮತ್ತು ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕು.

