Bengaluru 22°C
Ad

ರೈತ ಪರ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ ಅನಾರೋಗ್ಯದಿಂದ ನಿಧನ

ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಜಯಶ್ರೀ (40) ಮೃತಪಟ್ಟಿದ್ದಾರೆ.

ಬೆಳಗಾವಿ: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಜಯಶ್ರೀ (40) ಮೃತಪಟ್ಟಿದ್ದಾರೆ.

ಜಯಶ್ರೀ ಅವರು ಉತ್ತರ ಕರ್ನಾಟಕ ಭಾಗದಲ್ಲಿ ರೈತರ ಪರ ಹೋರಾಟ ಮಾಡಿದ್ದರು. ಹೆಚ್​.ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ದೊಡ್ಡ ಮಟ್ಟದ ಹೋರಾಟ ಕಟ್ಟಿದ್ದರು.

ಕಬ್ಬಿನ ಬಾಕಿ ಬಿಲ್​​ ಪಾವತಿಗಾಗಿ ಒತ್ತಾಯಿಸಿ ಸುವರ್ಣ ಸೌಧಕ್ಕೆ ಕಬ್ಬು ತುಂಬಿದ ಲಾರಿ ತೆಗೆದುಕೊಂಡು ಹೋಗಿ ಹೋರಾಟ ಮಾಡಿದ್ದರು. ಈ ವೇಳೆ ಕುಮಾರಸ್ವಾಮಿ ಅವರು ಜಯಶ್ರೀ ಕುರಿತು ಹಗುರವಾಗಿ ಮಾತಾಡಿ ಟೀಕೆಗೆ ಒಳಗಾಗಿದ್ದರು.  ಬಳಿಕ ರಾಜ್ಯಾದ್ಯಂತ ಸಂಚಾರ ಮಾಡಿ ಮಹಿಳೆಯರನ್ನು ರೈತ ಸಂಘಟನೆಯಲ್ಲಿ ತೊಡಗಿಸಿದ್ದರು.

Ad
Ad
Nk Channel Final 21 09 2023
Ad