News Karnataka Kannada
Monday, April 29 2024
ಬೆಳಗಾವಿ

ಬೆಳಗಾವಿ ಬಿಜೆಪಿ ಅಭ್ಯರ್ಥಿ ಆಯ್ಕೆ : ಶೆಟ್ಟರ್​ಗೆ ಟಿಕೆಟ್ ಕೈತಪ್ಪುವ ಸಾಧ್ಯತೆ

ಲೋಕಸಭಾ ಚುನಾವಣೆ ಹಿನ್ನೆಲೆ ಬೆಳಗಾವಿ ಕ್ಷೇತ್ರದಿಂದ ಜಗದೀಶ್‌ ಶೆಟ್ಟರ್‌ ಅವರು ಸ್ಪರ್ಧಿಸುತ್ತಾರೆ ಎಂಬುದು ಇನ್ನೇನು ಖಚಿತಪಡಿಸುವಾಗಲೇ ಒಂದು ಟ್ವಿಸ್ಟ್‌ ಸಿಕಿದೆ ಇದೀಗ ಬೆಳಗಾವಿಯ ಪಂಚಮಸಾಲಿ ಸಮುದಾಯಕ್ಕೆ ಟಿಕೇಟ್‌ ನೀಡುವಂತೆ ಒತ್ತಡ ಹಾಕಲಾಗುತ್ತಿದೆ.
Photo Credit : News Kannada

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆ ಬೆಳಗಾವಿ ಕ್ಷೇತ್ರದಿಂದ ಜಗದೀಶ್‌ ಶೆಟ್ಟರ್‌ ಅವರು ಸ್ಪರ್ಧಿಸುತ್ತಾರೆ ಎಂಬುದು ಇನ್ನೇನು ಖಚಿತಪಡಿಸುವಾಗಲೇ ಒಂದು ಟ್ವಿಸ್ಟ್‌ ಸಿಕ್ಕಿದೆ ಇದೀಗ ಬೆಳಗಾವಿಯ ಪಂಚಮಸಾಲಿ ಸಮುದಾಯಕ್ಕೆ ಟಿಕೇಟ್‌ ನೀಡುವಂತೆ ಒತ್ತಡ ಹಾಕಲಾಗುತ್ತಿದೆ.

ಹಾವೇರಿ ಮತ್ತು ಧಾರವಾಡ ಕ್ಷೇತ್ರದಲ್ಲಿ ಟಿಕೆಟ್ ಸಿಗದೆ ಮುನಿಸಿಕೊಂಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್​ಗೆ ಬೆಳಗಾವಿಯಿಂದ ಸ್ಪರ್ಧಿಸುವ ಆಫರ್ ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದರು. ಹಾಗೂ ಬೆಳಗಾವಿಯಲ್ಲೂ ಆಹ್ವಾನ ನೀಡಿದ್ದಾರೆ ಎಂದು ಹೇಳಿಕೊಂಡಿದ್ದರು ಆದರೆ ಈಗ ಕ್ಷಣದಲ್ಲಿ ಅವರ ಕೈಯಿಂದ ಟಿಕೇಟ್‌ ತಪ್ಪಿಹೋಗುವ ಸಾಧ್ಯತೆ ಇದೆ ಎಂಬ ವದಂತಿ ಕೇಳಿ ಬಂದಿದೆ. ಇದೀಗ ಅವರ ಸ್ಥತಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ.

ಈ ನಡುವೆ ಬೆಳಗಾವಿ ಟಿಕೆಟ್ ಪಡೆಯಲು ಬಿಜೆಪಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ ಅಲ್ಲದೇ ಅವರಿಗೆ ಸಹಾಯಕನಾಗಿ ರಮೇಶ್ ಜಾರಕಿಹೊಳಿ ಪ್ರಯತ್ನ ಮಾಡುತ್ತಿದ್ದಾರೆ. ಸದ್ಯಕ್ಕೆ ಈ ಎಲ್ಲಾದಕ್ಕೂ ಉತ್ತರ ಕಾಣಲು ನಾಳೆ ಬಿಡುಗಡೆ ಆಗುತ್ತಿರುವ ಬಿಜೆಪಿ 3ನೇ ಪಟ್ಟಿಯನ್ನು ಕಾಯಬೇಕಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು