Bengaluru 21°C
Ad

ಬೆಳಗಾವಿಯಲ್ಲಿ ಕೆರೆಗೆ ಹಾರಿ ಯೋಧ ಆತ್ಮಹತ್ಯೆಗೆ ಶರಣು

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ.

Ad

ಚೆನ್ನಮ್ಮನ ಕಿತ್ತೂರು ತಾಲೂಕು ದೇಗಾಂವ ಗ್ರಾಮದ ನರೇಶ್ ಯಲ್ಲಪ್ಪ ಆಗಸರ (28) ಶನಿವಾರ ಸಂಜೆ ಪರಸನಟ್ಟಿ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

Ad

ಕಳೆದ 20 ದಿನಗಳ ಹಿಂದೆ ರಜೆ ಮೇಲೆ ದೇಗಾಂವ ಗ್ರಾಮಕ್ಕೆ ಬಂದಿದ್ದರು. ರಜೆ ಮುಗಿಸಿ ನವೆಂಬರ್ 24ರಂದು ಸೇನಾ ಕರ್ತವ್ಯಕ್ಕೆ ಹಾಜರಾಗಬೇಕಾಗಿತ್ತು. ಆದರೆ ಇದೀಗ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವಾರು ಸಂದೇಹಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಕಿತ್ತೂರು ಪಿಎಸ್‌ಐ ಪ್ರವೀಣ ಗಂಗೋಳ, ಪ್ರವೀಣ ಕೋಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad
Ad
Ad
Nk Channel Final 21 09 2023