ಚಿಕ್ಕೋಡಿ: ಹಾವು ಕಚ್ಚಿ ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ.
ಬಾಲಕಿ ಮನೆ ಹೊರಗೆ ಆಟ ಆಡುತ್ತಿದ್ದಾಗ ಹಾವು ಕಚ್ಚಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜವಾಗದೆ 2.6 ವರ್ಷದ ತ್ರಿವೇಣಿ ಮೃತಪಟ್ಟಿದ್ದಾಳೆ.
ಬಾಲಕಿ ಮನೆ ಹೊರಗೆ ಆಟವಾಡುತ್ತಿದ್ದ ವೇಳೆ ಹಾವು ಕಚ್ಚಿದ್ದು, ಇದರಿಂದ ಅಸ್ವಸ್ಥಳಾಗಿದ್ದ ಬಾಲಕಿಯನ್ನು ಚಿಕ್ಕೋಡಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ತ್ರಿವೇಣಿ ಕೊನೆಯುಸಿರೆಳೆದಿದ್ದಾಳೆ ಎಂಬ ಮಾಹಿತಿ ತಿಳಿದು ಬಂದಿದೆ.