News Karnataka Kannada
Friday, April 12 2024
Cricket
ವಿಜಯಪುರ

ರಸ್ತೆ ಅಪಘಾತ : ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದ ಎಂಎಲ್ಎ

Untitled 177
Photo Credit :

ವಿಜಯಪುರ : ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಯಲ್ಲಿ ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗುವ ಮೂಲಕ ಜಿಲ್ಲೆಯ ಶಾಸಕರೊಬ್ಬರು ಮಾನವೀಯತೆ ಮೆರೆದಿದ್ದಾರೆ.ನಾಗಠಾಣ ಮತಕ್ಷೇತ್ರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ -52 ರ ವಿಜಯಪುರ ತಾಲೂಕಿನ ಕನ್ನಾಳ ಗ್ರಾಮದ ವೈನ್ ಫ್ಯಾಕ್ಟರಿ ಹತ್ತಿರ ಎರಡು ಬೈಕ್ ಗಳ ಮಧ್ಯೆ ಬುಧವಾರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿ ಮೃತಪಟ್ಟಿದ್ದ.

ಗಂಭೀರ ಗಾಯಗೊಂಡಿದ್ದ ಇನ್ನಿಬ್ಬರು ತೀವ್ರ ರಕ್ತಸ್ರಾವವಾಗಿ ಪರದಾಡುತ್ತಿದ್ದರು. ಈ ಸಂದರ್ಭದಲ್ಲಿ ಇದೇ ಮಾರ್ಗವಾಗಿ ಸಾಗುತ್ತಿದ್ದ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಕೂಡಲೇ ವಾಹನ ನಿಲ್ಲಿಸಿ, ಅಂಬ್ಯುಲೆನ್ಸ್ ಗೆ ಕರೆ ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿ, ಮಾನವೀಯತೆ ಮೆರೆದಿದ್ದಾರೆ.

ಗಾಯಾಳುಗಳನ್ನು ವಿಜಯಪುರ ನಗರದ ಆಶ್ರಮ ಕಾಲೋನಿ ನಿವಾಸಿ ಗಳೆಂದು, ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿಯನ್ನು ಡೊಮನಾಳ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದ ಶಾಸಕ ದೇವಾನಂದ ಅವರ ಈ ಮಾನವೀಯ ಕಾರ್ಯಕ್ಕೆ ಜನ‌ ಮೆಚ್ಚುಗೆ ವ್ಯಕ್ತವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು