ವಿಜಯಪುರ: ಕಬ್ಬಿನ ಬೆಳೆಯಲ್ಲಿ ಅಕ್ರಮವಾಗಿ ಬೆಳೆದಿದ್ದ 10 ಲಕ್ಷ ರೂ. ಮೌಲ್ಯದ 100 ಕೆಜಿ ಗಾಂಜಾ ಗಿಡಗಳನ್ನು ಅಬಕಾರಿ ಪೊಲೀಸರು ಜಪ್ತಿಮಾಡಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ನಡೆದಿದೆ.
ಮಾದೇವ ಬಸ್ಕಿ ಎಂಬವನು, ಅಕ್ರಮವಾಗಿ ಕಬ್ಬಿನ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಅಬಕಾರಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.