ವಿಜಯಪುರ: ಕಾಲು ಜಾರಿ ಬಾವಿಯಲ್ಲಿ ಬಿದ್ದು ಯುವಕ ಸಾವಿಗೀಡಾದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವನನ್ನು ಸಮರ್ಥ ರಾಜೇಶ ಹಡಪದ ಎಂದು ಗುರುತಿಸಲಾಗಿದೆ.
ಸಮರ್ಥ ಹಡಪದ ಈತನು ಜಮೀನಿನಲ್ಲಿರುವ ಪಂಪ್ ಸೇಟ್ ಆನ್ ಮಾಡಲು ಹೋಗಿದ್ದ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ. ಸುದ್ದಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.