ವಿಜಯಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಸ್ಥಳದಲ್ಲಿ ಪ್ರತಿ ವೋಟಿಗೆ 500 ರೂ. ಹಂಚುತ್ತಿರುವ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದೆ.
ನಗರದ ಹಳೇ ತಹಶೀಲ್ದಾರ್ ಕಚೇರಿಯ ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದ್ದು, ಮತಕೇಂದ್ರದ ನೂರು ಮೀಟರ್ ಆಚೆಯಲ್ಲಿ ಅಭ್ಯರ್ಥಿಯ ಬೆಂಬಲಿಗರು ಜನರಿಗೆ 500 ರೂ. ಹಣ ಹಂಚಿಕೆ ಮಾಡುತ್ತಿದ್ದಾರೆ ಎಂದು ಜಿಲ್ಲಾ ಅಧ್ಯಕ್ಷ ಸ್ಥಾನದ ಚುನಾವಣೆ ಅಭ್ಯರ್ಥಿಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.