ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬೆಳ್ಳುಬ್ಬಿ ಹಾಗೂ ಮಂಗಳೂರು ರಸ್ತೆಯ ಕ್ರಾಸ್ ಬಳಿ ನಡೆದಿದೆ.
ಇಲ್ಲಿನ ಜೈನಾಪುರದಿಂದ ವಿಜಯಪುರ ಕಡೆಗೆ ಹೊರಟಿದ್ದ ಟೆಂಪೋ ಪಲ್ಟಿಯಾಗಿದ್ದು, ಟೆಂಪೋದಲ್ಲಿನ ಹಲವರಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯತನದಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.