News Karnataka Kannada
Saturday, May 04 2024
ವಿಜಯಪುರ

ವಿಜಯಪುರ: ತಂದೆಯಿಂದಲೇ ಮಕ್ಕಳ ಹತ್ಯೆಗೆ ಯತ್ನ..!

Death
Photo Credit :

ವಿಜಯಪುರ: ಎರಡನೇ ಪತ್ನಿಯ ಮಾತು ಕೇಳಿ, ಹುಟ್ಟಿಗೆ ಕಾರಣನಾದ ತಂದೆಯೇ ಮಕ್ಕಳ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ ಘಟನೆಯಲ್ಲಿ ಓರ್ವ ಮಗು ಸಾವನ್ನಪ್ಪಿದ್ದು, ಇನ್ನೊಂದು ಮಗು ಆಸ್ಪತ್ರೆಯಲ್ಲಿ ಜೀವನ್ಮರಣದ ಮಧ್ಯೆ ಹೋರಾಡುತ್ತಿದೆ.

ಸುಮಿತ್ ಎಂಬ ಬಾಲಕ ಸಾವನ್ನಪ್ಪಿದ್ದು, ಸಂಪತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಿನೋದ್ ನ ಮೊದಲ ಪತ್ನಿ ಸಾವನ್ನಪ್ಪಿದ್ದರು. ಈ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದರು.

ಈ ಘಟನೆ ತಾಲೂಕಿನ ಮಿಂಚನಾಳ ತಾಂಡಾದಲ್ಲಿ ನಡೆದಿದೆ . ವಿನೋದ್ ಚವ್ಹಾಣ್ ಎಂಬ ವ್ಯಕ್ತಿಯೇ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.‌

ಆ ನಂತರ ಈ ವ್ಯಕ್ತಿ ಎರಡನೇ ಮದುವೆಯಾಗಿದ್ದ. ಆದರೆ, ಎರಡನೇ ಪತ್ನಿಗೆ ಈ ಮಕ್ಕಳನ್ನು ಕಂಡರೆ ಆಗುತ್ತಿರಲಿಲ್ಲ. ಹೀಗಾಗಿ ಮಕ್ಕಳ ಕೊಲೆಗೆ ಪ್ರೋತ್ಸಾಹಿಸಿದ್ದಾಳೆ ಎನ್ನಲಾಗಿದೆ.

ಹೀಗಾಗಿಯೇ ತಾನೇ ಹೆತ್ತ ಮಕ್ಕಳನ್ನು ಕೊಲ್ಲಲು ಮುಂದಾಗಿದ್ದಾನೆ ಎಂದು ತಿಳಿದು ಬಂದಿದೆ. ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು