Categories: ವಿಜಯಪುರ

ವಿಜಯಪುರ: ವಿದ್ಯುತ್ ಶಾಕ್ ನಿಂದ ಕಾಲುವೆಗೆ ಬಿದ್ದ ರೈತ ಸಾವು

ಮುದ್ದೇಬಿಹಾಳ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಕೋಳೂರು ಗ್ರಾಮ ವ್ಯಾಪ್ತಿಯ ಆಲಮಟ್ಟಿ ಎಡದಂಡೆ ಕಾಲುವೆಯಲ್ಲಿ ಹೊಲದಲ್ಲಿನ ಬೆಳೆಗೆ ನೀರು ಹಾಯಿಸಲು ಮೋಟಾರ್ ಚಾಲೂ ಮಾಡಲು ಹೋಗಿದ್ದ ರೈತನೊಬ್ಬ ವಿದ್ಯುತ್ ಶಾಕ್ ತಗುಲಿ ಗಾಭರಿಗೊಂಡು ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ರೈತನೊಬ್ಬ ಸಾವನ್ನಪ್ಪಿರುವ ಘಟನೆ  ನಡೆದಿದೆ.

ಈ ಘಟನೆ ನಿನ್ನೆ ಸಂಜೆಯೇ ನಡೆದಿದ್ದು ಶವ ಕಾಲುವೆಯಲ್ಲಿ ತೇಲಿಕೊಂಡು ಕೆಸಾಪೂರ ಗ್ರಾಮದ ಬಳಿ ಬಂದಾಗ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತ ರೈತನನ್ನು ಕೋಳೂರು ಗ್ರಾಮದ ಹಣಮಂತ ಭೀಮಶೆಪ್ಪ ಹದ್ದಿನ (54) ಎಂದು ಗುರ್ತಿಸಲಾಗಿದೆ. ಮೃತನಿಗೆ ಪತ್ನಿ, ಓರ್ವ ಪುತ್ರ, ಪುತ್ರಿ ಇದ್ದಾರೆ.

1.5 ಎಕರೆ ಜಮೀನು : ಮೃತ ರೈತನಿಗೆ 4 ಎಕರೆ ಜಮೀನು ಇತ್ತು. ಕಾಲುವೆ ನಿರ್ಮಾಣದಲ್ಲಿ ಅಂದಾಜು 2 ಎಕರೆಗೂ ಹೆಚ್ಚು ಜಮೀನು ಮುಳುಗಡೆ ಆಗಿತ್ತು. ಇದ್ದ ಒಂದೂವರೆ ಎಕರೆ ಜಮೀನಿನಲ್ಲಿ ಬೇಸಿಗೆ ಶೇಂಗಾ ಬೆಳೆದಿದ್ದ. ಇದಕ್ಕೆ ಕಾಲುವೆ ನೀರನ್ನು ಅವಲಂಬಿಸಿದ್ದ. ಮುಖ್ಯ ಕಾಲುವೆಯಿಂದ ನೀರೆತ್ತಿ ಹೊಲಕ್ಕೆ ಹರಿಸಲು ವಿದ್ಯುತ್ ಚಾಲಿತ ಮೋಟಾರ್ ಅಳವಡಿಸಿದ್ದ. ಈ ಮೋಟಾರ್ ಚಾಲೂ ಮಾಡಲು ಹೋದಾಗ ಶಾಕ್ ಹೊಡೆದಂತಾಗಿ ಗಾಭರಿಯಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದಿದ್ದಾನೆ. ಬಿದ್ದ ಜಾಗದಲ್ಲಿ ಕಾಲುವೆಯ ಆಳ ಹೆಚ್ಚಾಗಿದ್ದು, ನೀರಿನ ಒತ್ತಡವೂ ಬಹಳಷ್ಟಿರುವುದರಿಂದ ಆತ ಸಾವನ್ನಪ್ಪಿದ್ದಾನೆ. ಶವ ನೀರಿನ ಸೆಳವಿಗುಂಟ ಹರಿದು ಹೋಗಿದ್ದರಿಂದ ತಕ್ಷಣಕ್ಕೆ ಸಿಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

 

Swathi MG

Recent Posts

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

10 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

21 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

52 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

1 hour ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

1 hour ago