Categories: ವಿಜಯಪುರ

ವಿಜಯಪುರ: 12 ವರ್ಷದ ಬಾಲಕ ವಿದ್ಯುತ್ ಶಾಕ್​ಗೆ ಬಲಿ

ವಿಜಯಪುರ : ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ ಇಲ್ಲೊಂದಷ್ಟು ಹುಡುಗರು ಇಂದು ಹೋಳಿ ಹಬ್ಬ ಮಾಡಿ ಸಂಭ್ರಮಿಸುತ್ತಿದ್ದರು. ಆದರೆ ದುರದೃಷ್ಟವಶಾತ್, ಅವರೆಲ್ಲ ಶೋಕದ ಮಡುವಿನಲ್ಲಿ ಮುಳುಗುವಂತಾಗಿದೆ. ಅಷ್ಟಕ್ಕೂ ಕಾರಣವಾಗಿದ್ದು ಅದೊಂದು ದುರಂತ.

ವಿಜಯಪುರ ಜಿಲ್ಲೆ ಕೊಲ್ಹಾರ ತಾಲ್ಲೂಕಿನ ತಳೇವಾಡ ಗ್ರಾಮದಲ್ಲಿ ಈ ಅವಘಡ ಸಂಭವಿಸಿದ್ದು, ಹಣಮಂತ ಬೀರಪ್ಪ ವಾಲಿಕಾರ (12) ಎಂಬ ಬಾಲಕ ಸಾವಿಗೀಡಾಗಿದ್ದಾನೆ. ಈತ ಹೋಳಿಯಾಟಕ್ಕೆಂದು ಅಣಿಗೊಳಿಸುತ್ತಿದ್ದಾಗ ವಿದ್ಯುತ್ ಶಾಕ್​ಗೆ ಒಳಗಾಗಿ ಸಾವಿಗೀಡಾಗಿದ್ದಾನೆ.

ಬಣ್ಣದಾಟಕ್ಕೆಂದು ಗ್ರಾಮ ಪಂಚಾಯಿತಿ ವತಿಯಿಂದ ನೀರಿನ ತೊಟ್ಟಿ ನಿರ್ಮಿಸಲಾಗಿತ್ತು. ಅದಕ್ಕೆ ನೀರು ತುಂಬುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ತುಂಡಾಗಿ ನೀರಿನ ತೊಟ್ಟಿಗೆ ಬಿದ್ದಿದೆ. ಇದರಿಂದ ವಿದ್ಯುತ್ ಶಾಕ್​ಗೆ ಒಳಗಾಗಿ ಈತ ಮೃತಪಟ್ಟಿದ್ದಾನೆ.

ಘಟನೆಗೆ ಗ್ರಾಮ ಪಂಚಾಯತಿಯ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಗ್ರಾಮ ಪಂಚಾಯಿತಿ ಮುಂದೆ ಬಾಲಕನ ಶವವಿಟ್ಟು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಸ್ಥಳಕ್ಕೆ ಕೂಡಗಿ ಎನ್​​ಟಿಪಿಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Gayathri SG

Recent Posts

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

14 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

18 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

41 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

1 hour ago