Categories: ವಿಜಯಪುರ

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15 ಅಭ್ಯರ್ಥಿಗಳ ಗೆಲುವು ಖಚಿತ : ಗೋವಿಂದ ಕಾರಜೋಳ

ವಿಜಯಪುರ : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ 15 ಅಭ್ಯರ್ಥಿಗಳು ನೂರಕ್ಕೆ ನೂರರಷ್ಟು ಗೆಲುವು ಸಾಧಿಸುವ ಭರವಸೆಯಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಂಚಾಯತ್ ರಾಜ್ ಬಲಗೊಳಿಸುವ ನಿಟ್ಟಿನಲ್ಲಿ ಮಹಾತ್ಮ ಗಾಂಧಿಜಿ ಬಯಸಿದ ಅಭಿವೃದ್ಧಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡುತ್ತಿದ್ದಾರೆ ಎಂದರು.

ಮೋದಿ ಅವರ ಏಳು ವರ್ಷಗಳ ಅಭಿವೃದ್ಧಿ ಕಾರ್ಯ, ಬಿ.ಎಸ್. ಯಡಿಯೂರಪ್ಪನವರ ಜನಪರ ಯೋಜನೆಗಳನ್ನು ಮುಂದಿಟ್ಟು ಮತಯಾಚನೆ ಮಾಡಲಾಗುತ್ತಿದೆ. 56 ವರ್ಷ ಕಾಂಗ್ರೆಸ್ ಆಡಳಿತದಲ್ಲಿ ಗ್ರಾಮ ಸ್ವರಾಜ್ಯದ ಕನಸಿನ ನನಸು ಆಗಿಲ್ಲ. ಸದ್ಯ ಮೋದಿ ಆಡಳಿತ ಸಶಕ್ತವಾಗಿ ಕ್ರೀಯಾಯೋಜನೆ ರೂಪಿಸಿ, ಪಂಚಾಯತ್ ರಾಜ್ ಬಲಗೊಳಿಸಲಾಗುತ್ತಿದ್ದು, ಜಲ ಜೀವನ ಮಿಷನ್ ಜಾರಿಗೊಳಿಸಲಾಗಿದ್ದು, 8500 ಕೋಟಿ ರೂ. ಮೊದಲ ಕಂತಾಗಿ ಬಿಡುಗಡೆ ಮಾಡಲಾಗಿದೆ ಎಂದರು.

ದೀನ ದಲಿತರು, ಅಲ್ಪಸಂಖ್ಯಾತರು ಕಾಂಗ್ರೆಸ್ ಪರವಾಗಿ ಇದ್ದಾರೆ ಎಂದು ಅವರು ಭ್ರಮೆಯಲ್ಲಿದ್ದಾರೆ. ಅವರೆಲ್ಲ ಕೈ ಬಿಟ್ಟಿದ್ದರಿಂದಲೇ ಎಲ್ಲ ಕಡೆ ಕಾಂಗ್ರೆಸ್ ಸೋಲು ಅನುಭವಿಸುತ್ತಿದ್ದು, ಕಾಂಗ್ರೆಸ್ ಮುಕ್ತ ಭಾರತ ಆಗುವ ಕಾಲ ದೂರವಿಲ್ಲ ಎಂದರು.

ಅವಳಿ ಜಿಲ್ಲೆ ವಿಜಯಪುರ- ಬಾಗಲಕೋಟಯಲ್ಲಿ 4300 ಬಿಜೆಪಿ ಬೆಂಬಲಿತ ಮತಗಳಿದ್ದು, ಬಿಜೆಪಿ ಅಭ್ಯರ್ಥಿ ಪಿ.ಎಚ್. ಪೂಜಾರ ಮೊದಲ ಪ್ರಾಶಸ್ತ್ಯ ಮತಗಳಿಂದ ಗೆಲವು ಸಾಧಿಸಲಿದ್ದಾರೆ ಎಂದರು.

ಮುಖ್ಯಮಂತ್ರಿ ಬದಲಾವಣೆ ಮಾತು ಅಪ್ರಸ್ತುತ, ಮಳೆ, ಕೊರೋನಾ ಸಂಕಷ್ಟಗಳಿಗೆ ನಮ್ಮ ಆದ್ಯತೆ ಹೊರತು, ಕುರ್ಚಿಗಾಗಿ ಅಲ್ಲ. ಉತ್ತಮ ಆಡಳಿತ ನೀಡುವ ಹಂಬಲ ನಮ್ಮದಾಗಿದೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲು ಗೆಜೆಟ್ ಆಗಬೇಕ. ಅಲ್ಲದೇ, ನ್ಯಾಯಾಲಯದಲ್ಲಿ ವ್ಯಾಜ್ಯ ಇದೆ. ಹೀಗಾಗಿ ಕೃಷ್ಣಾ ಮೇಲ್ದಂಡೆ ಯೋಜನೆ ರಾಷ್ಟ್ರೀಕರಣಗೊಳಿಸಲು ವಿಳಂಬವಾಗಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ, ವಿಧಾನ ಪರಿಷತ್ ಅಭ್ಯರ್ಥಿ ಪಿ.ಎಚ್.ಪೂಜಾರ, ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ರಮೇಶ ಭೂಸನೂರ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಚಂದ್ರಶೇಖರ ಕವಟಗಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

5 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

5 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

6 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

6 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

6 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

6 hours ago