ವಿಜಯಪುರ: ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 20 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದು ಪಕ್ಕಾ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸಗಳು ಸಾಕಷ್ಟು ಆಗಿದೆ. ಈ ಕಾರಣಕ್ಕಾಗಿ ಬಿಜೆಪಿ ಅಭ್ಯರ್ಥಿ ಜಯಶಾಲಿ ಆಗಲಿದ್ದಾರೆ ಎಂದು ಹೇಳಿದರು.
ಅಲ್ಲದೇ, ಸಿಂದಗಿ ಉಪ ಚುನಾವಣೆಯಲ್ಲಿ ಸಚಿವರು ಹಾಗೂ ಶಾಸಕರು ಸಾಕಷ್ಟು ಪ್ರಮಾಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಜನತೆಗೆ ತಿಳಿ ಹೇಳಿ ಅಭಿವೃದ್ಧಿ ಹೆಸರಿನಲ್ಲಿ ಮತ ಕೇಳಲಾಗಿದೆ. ಆ ಹಿನ್ನಲೆ ಮತದಾರರ ಆಶೀರ್ವಾದ ನಮ್ಮ ಮೇಲೆ ಇದೆ ಎಂದರು.