ವಿಜಯಪುರ

ಸೆಪ್ಟೆಂಬರ 5 ರಂದು ರೈತರ ಮಕ್ಕಳಿಗೆ ಶಿಷ್ಯವೇತನ ವಿತರಣೆ ಕಾರ್ಯಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿಜಯಪುರ : ನಾಡಿಗೆ ಅನ್ನ ನೀಡುವ ರೈತರ ಮಕ್ಕಳ ಶಿಕ್ಷಣಕ್ಕಾಗಿ ಪದವಿ ಪೂರ್ವದಿಂದ ಸ್ನಾತಕೋತ್ತರವರೆಗೆ ವಿಷೇಶ ಶಿಷ್ಯವೇತನ ನೀಡುವ ಯೋಜನೆ ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು.
ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಬಾಗಿನ ಅರ್ಪಿಸಿದ ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಶಿಷ್ಯ ವೇತನ ಯೋಜನೆಯಿಂದ ರಾಜ್ಯದ 18 ಲಕ್ಷದ ರೈತರ ಮಕ್ಕಳಿಗೆ ಅನುಕೂಲವಾಗಿದೆ. ಇದಕ್ಕಾಗಿ ಸರಕಾರ ಒಂದು ಸಾವಿರ ಕೋಟಿ ರೂ.ಗಳನ್ನು ಮೀಸಲಾಗಿರಿಸಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಸೆಪ್ಟೆಂಬರ 5 ರಂದು ಎಲ್ಲ ಜಿಲ್ಲೆಯ 5 ಜನ ರೈತರ ಮಕ್ಕಳನ್ನು ಕರೆಯಿಸಿ ಶಿಷ್ಯವೇತನ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ರೈತಾಪಿ ವರ್ಗ ಹವಾಮಾನದ ವೈಪರಿತ್ಯದ ನಡುವೆ ಬದುಕುತ್ತಿರುವುದರಿಂದ ಕೃಷಿಯೇ ಅವರ ಜೀವನಾಧಾರಿತವಾಗಿದ್ದು, ಗ್ರಾಮದ ಹಲವಾರು ಮನೆಗಳಲ್ಲಿ ಕೆಲವು ಮನೆಗಳು ಮಾತ್ರ ಸುಸಜ್ಜಿತವಾಗಿರುವದನ್ನು ಕಾಣುತ್ತಿದ್ದೇವೆ. ಅಂತಹ ಮನೆಯಲ್ಲಿ ಒಬ್ಬರಾದರೂ ಶಿಕ್ಷಣ ಹಾಗೂ ಕೌಶಲ್ಯದಿಂದ ಪ್ರಗತಿ ಹೊಂದಿರುತ್ತಾರೆ. ಆದ್ದರಿಂದ ಆರ್ಥಿಕ ಪ್ರಗತಿಗೆ ಶಿಕ್ಷಣ, ಕೌಲಶ್ಯ ಮಹತ್ವವಾಗಿದೆ ಎಂದು ತಿಳಿಸಿದರು. ಬಡವರಿಗೆ ಸಾಮಾಜಿಕ ಭದ್ರತೆ ಯೋಜನೆಯಡಿ ಸಂದ್ಯಾ ಸುರಕ್ಷಾ ಮತ್ತು ವಿಕಲಚೇತನರಿಗೆ ನೀಡುವ ಮಾಶಾಸನದ ಮೊತ್ತವನ್ನು ಹೆಚ್ಚಿಸಲಾಗಿದ್ದು, ಬರುವ ಸೆಪ್ಟೆಂಬರದಿಂದ ಜಾರಿಗೆ ಬರಲಿದೆ.
Raksha Deshpande

Recent Posts

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

13 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

41 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

3 hours ago