News Karnataka Kannada
Monday, April 29 2024
ವಿಜಯಪುರ

ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಇವೆಲ್ಲವೂ ಇರುವುದು ಬಡವರ ಒಳಿತಿಗಾಗಿ: ಎಂ.ಬಿ.ಪಾಟೀಲ

Annabhagya, Grihalakshmi, Shakti, Yuvanidhi are all for the good of the poor: M.B. Patil
Photo Credit : News Kannada

ವಿಜಯಪುರ: ‘ರಾಜ್ಯದಲ್ಲಿ ಬಿಜೆಪಿ ಈ ಹಿಂದೆ ಅಧಿಕಾರದಲ್ಲಿ ಇದ್ದಾಗ ಮುಖ್ಯಮಂತ್ರಿ ಹುದ್ದೆಯನ್ನು ₹2,500 ಕೋಟಿಗೆ ನಿಗದಿಪಡಿಸಿದ್ದರು. ಬಹುಶಃ ಈಗ ಅವರ ಪಕ್ಷದಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೂ ನೂರಾರು ಕೋಟಿಗಳನ್ನು ನಿಗದಿಪಡಿಸಿ ಮಾರಾಟಕ್ಕೆ ಇಟ್ಟಿರಬೇಕು’ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಎಂ.ಬಿ.ಪಾಟೀಲ ಲೇವಡಿ ಮಾಡಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ವೇಳೆ ಅವರು, ‘ನಮ್ಮ ಸರ್ಕಾರವು ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿರುವುದು ಅವರ ಘನತೆಗೆ ತಕ್ಕನಾಗಿಲ್ಲ. ಒಬ್ಬ ಕೇಂದ್ರ ಸಚಿವರಾಗಿ ಅವರು ಹೀಗೆಲ್ಲ ಮಾತನಾಡಬಾರದು. ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಇವೆಲ್ಲವೂ ಇರುವುದು ಬಡವರ ಒಳಿತಿಗಾಗಿಯೇ ವಿನಃ ಶ್ರೀಮಂತರಿಗಲ್ಲ ಎನ್ನುವುದನ್ನು ಅವರು ಅರಿಯಬೇಕು ಎಂದು ಸಚಿವರು ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು