Categories: ವಿಜಯಪುರ

ಪ್ರತಿ ಬೂತ್ ನಲ್ಲಿ ಬಿಜೆಪಿ ಪರ ಅಲೆ, ಕಾರ್ಯಕರ್ತರಲ್ಲಿ ಅತ್ಯುತ್ಸಾಹ : ಪ್ರಕಾಶ ಅಕ್ಕಲಕೋಟ.

ವಿಜಯಪುರ : ವಿಜಯಪುರ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಬೂತ್ ಗಳಲ್ಲಿ ಬಿಜೆಪಿ‌ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು, ಬಿಜೆಪಿ ಪರ‌ ಅಲೆ‌ ಇದೆ ಎಂದು ಬಿಜೆಪಿ ಬೆಳಗಾವಿ ವಿಭಾಗದ ಪ್ರಭಾರಿ ಪ್ರಕಾಶ ಅಕ್ಕಲಕೋಟ ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆ‌ ಅವರು ಬಿಜೆಪಿ‌‌ ಅಭ್ಯರ್ಥಿ ರಮೇಶ ಜಿಗಜಿಣಗಿ ಪರ ನಗರದ ಡೋಹರ ಗಲ್ಲಿ‌ ಹಾಗೂ ಅಗಸರ ಗಲ್ಲಿಯಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರತಿ ಮನೆಮನೆಗೆ ತೆರಳಿ ಕರಪತ್ರ ಹಂಚಿ ಬಿಜೆಪಿ ಪರ ಮತಯಾಚಿಸಿದರು. ಜಿಲ್ಲೆಯ ಎಲ್ಲಾ ಬೂತ್ ಗಳಲ್ಲಿ ಬಿಜೆಪಿ ಕಾರ್ಯಕರ್ತರು ಅತ್ಯುತ್ಸಾಹದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ನಮ್ಮ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಕಳೆದ ಅವಧಿಗಿಂತ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸುವ ವಿಶ್ವಾಸವಿದೆ. ಕಳೆದ ಹತ್ತು ವರ್ಷಗಳ ಮೋದಿಯವರ ಆಡಳಿತದಲ್ಲಿ ಇಡಿ ವಿಶ್ವವೇ ತಿರುಗಿ ನೋಡುವಂತೆ ದೇಶದಲ್ಲಾಗಿರುವ ಬದಲಾವಣೆ, ಅಭಿವೃದ್ಧಿ ಗಮನಿಸಿರುವ ಜನ ಮೋದಿ‌ ಆಡಳಿತ ಮೆಚ್ಚಿಕೊಂಡು ಈ‌ ಬಾರಿಯೂ ಬಿಜೆಪಿ ಬೆಂಬಲಿಸಲಿದ್ದು, ಗುರಿಯಂತೆ ಬಿಜೆಪಿ‌ 400 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಇಮ್ಮಡಿಗೊಳಿಸಿದೆ ಎಂದರು.

ಈ ವೇಳೆ ಪಾಲಿಕೆ ಸದಸ್ಯ ರಾಹುಲ್ ಜಾಧವ, ಮುಖಂಡರಾದ ಸಂತೋಷ ಬಾಗಲಕೋಟ, ಚಂದ್ರಕಾಂತ್ ಪೋಳ,ಶಂಕರ ಶೇರಖಾನೆ, ಗುರುರಾಜ ಇಂಗಳೆ, ಸುನಿಲ್ ಪೋಳ,ಜೀವನ ಹಿಪ್ಪರಗಿ, ಶೇಖರ ಬಾಗಲಕೋಟ ಸೇರಿದಂತೆ ಹಲವರಿದ್ದರು.

Maithri S

Recent Posts

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

16 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

17 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

38 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

49 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

51 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

1 hour ago