News Karnataka Kannada
Sunday, April 28 2024
ವಿಜಯಪುರ

ಎಲ್​​ ಕೆ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ: ನಮ್ಮ ತಕರಾರೇನೂ ಇಲ್ಲ ಎಂದ ಡಿಕೆಶಿ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಅಳಿಯ ಡಾ.ಮಂಜುನಾಥ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸುತ್ತಿರುವುದು ಜೆಡಿಎಸ್‍ಗೆ ಮೊದಲ ಆತ್ಮಹತ್ಯೆ ಯತ್ನದಂತಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
Photo Credit : News Kannada

ವಿಜಯಪುರ: ಬಿಜೆಪಿ ಹಿರಿಯ ಮುತ್ಸದ್ದಿ ಎಲ್​​ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿರುವುದಕ್ಕೆ ನಮ್ಮ ತಕರಾರೇನೂ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಅವರು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಅಡ್ವಾಣಿಯವರು ದೇಶದ ಹಿರಿಯ ರಾಜಕಾರಣಿ. ಅವರಿಗೆ ಭಾರತ ರತ್ನ ನೀಡಿದ್ದಕ್ಕೆ ನಮ್ಮ ತಕರಾರೇನೂ ಇಲ್ಲ. ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮದೇನು ತಕರಾರು ಇಲ್ಲ. ಆದರೆ ನಡೆದಾಡುವ ದೇವರೆಂದೇ ಖ್ಯಾತರಾದ ತ್ರಿವಿಧ ದಾಸೋಹಿ, ಶತಾಯುಷಿ, ಸಿದ್ಧಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಕೊಡಿ ಎಂದು ಆಗ್ರಹಿಸಿದ್ದಾರೆ.

ಈ ಹಿಂದೆಯೇ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ನಮ್ಮ ಸರ್ಕಾರ ಮನವಿ ಮಾಡಿತ್ತು. ಅದು ಅವರಿಗೆ ಬಿಟ್ಟ ವಿಚಾರ. ನಮ್ಮ ರಾಜ್ಯದಲ್ಲಿ ಅನ್ನದಾಸೋಹಕ್ಕೆ ಶ್ರೀಗಳು ಹೆಸರಾಗಿದ್ದವರು. ಅವರಿಗೆ ಗೌರವ ಸಲ್ಲಿಸಬೇಕು ಅನ್ನೋದು ನಮ್ಮ ಆಶಯ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು