Categories: ವಿಜಯಪುರ

ನೇಹಾ ಹತ್ಯೆ ಕೇಸ್ ತೀವ್ರ ಖಂಡನೀಯ: ಸಂಸದ ರಮೇಶ ಜಿಗಜಿಣಗಿ ಆಕ್ರೋಶ

ವಿಜಯಪುರ: ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ ಎಂಬ ಮುಗ್ಧ ಬಾಲಕಿಯನ್ನು ಯುವಕನೊಬ್ಬ ಕಾಲೇಜು ಆವರಣದಲ್ಲಿ ಹಾಡು ಹಗಲಲ್ಲೇ ಅಮಾನವೀಯವಾಗಿ‌ ಹತ್ಯೆ ಮಾಡಿರುವುದು ತೀವ್ರ ಖಂಡನೀಯ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಈ‌ ಕೃತ್ಯ ಜ್ವಲಂತ ಸಾಕ್ಷಿಯಾಗಿದೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ನೇಹಾ ಹತ್ಯೆ ಪ್ರಕರಣನ್ನು ತೀವ್ರವಾಗಿ ಖಂಡಿಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ವಿಶೇಷವಾಗಿ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಸುರಕ್ಷತೆ ಇಲ್ಲದಂತಾಗಿದೆ. ರಾಜ್ಯದಲ್ಲಿ ಇತ್ತಿಚೆಗೆ ಹತ್ಯೆ, ಸ್ಪೋಟದಂತಹ ಅಪರಾಧಿಕ ಕೃತ್ಯಗಳು ಹೆಚ್ಚಾಗಿದ್ದು, ದುಷ್ಕರ್ಮಿಗಳು, ಕೊಲೆಗಡುಕರಿಗೆ ಕಾನೂನಿನ ಮೇಲೆ ಯಾವುದೇ ಭಯವಿಲ್ಲದಂತಾಗಿದೆ. ನೇಹಾ ಬಾಲಕಿಯ ಕೊಲೆಗಾರನ ವಿರುದ್ಧ ಪೊಲೀಸ್ ಇಲಾಖೆ ನಿರ್ಧಾಕ್ಷಿಣ್ಯವಾಗಿ ಕಠಿಣ ಶಿಕ್ಷೆ ವಿಧಿಸಿ, ಇಂತಹ ದುಷ್ಠರಿಗೆ ಎಚ್ಚರಿಕೆಯ ಗಂಟೆಯಾಗುವಂತೆ ಕ್ರಮಕ್ಕೆ ಮುಂದಾಗಬೇಕು.

ಇಂತಹ ದುಷ್ಕೃತ್ಯಗಳಿಗೆ ದುಷ್ಠರಿಗೆ ಕಡಿವಾಣ ಹಾಕುವ ಕಾರಣಕ್ಕಾಗಿಯೇ ನಮ್ಮ ರಕ್ಷಣೆಗೆ, ವಿಕಸಿತ ಭಾರತಕ್ಕಾಗಿ ಮತ್ತೊಮ್ಮೆ ಮೋದಿ‌ ಬರಬೇಕೆಂಬುದು ಇಡಿ ದೇಶದ ಒಕ್ಕೊರಳಿನ ಧ್ವನಿಯಾಗಿದೆ.

Ashitha S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago